alex Certify ಕಾಮದ ಮದದಲ್ಲಿ ನಾಚಿಗೇಡಿನ ಕೃತ್ಯ: ನಾಯಿಯೊಂದಿಗೆ ನಿರಂತರವಾಗಿ ಅಸಹಜ ಲೈಂಗಿಕ ಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮದ ಮದದಲ್ಲಿ ನಾಚಿಗೇಡಿನ ಕೃತ್ಯ: ನಾಯಿಯೊಂದಿಗೆ ನಿರಂತರವಾಗಿ ಅಸಹಜ ಲೈಂಗಿಕ ಕ್ರಿಯೆ

ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಹೆಣ್ಣು ನಾಯಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 54 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಧ್ಯಪ್ರದೇಶದ ಬರೇಲಾದ ಸ್ಟಾರ್ ಸಿಟಿಯಲ್ಲಿ ವಾಸಿಸುತ್ತಿರುವ ಕಾಮುಕ ಮನೆ ಬಳಿ ಹೆಣ್ಣು ನಾಯಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋ ವೈರಲ್ ಆದ ನಂತರ ಅಪರಾಧ ಕೃತ್ಯ ಬೆಳಕಿಗೆ ಬಂದಿದ್ದು, ತನ್ನ ಮನೆಯ ಹೊರಗೆ ಮೆಟ್ಟಿಲ ಬಳಿ ಕುಳಿತಿದ್ದ ನಾಯಿಯೊಂದಿಗೆ ಇಂತಹ ಕೃತ್ಯವೆಸಗಿದ್ದಾನೆ.

ಪ್ರಾಣಿ ಪ್ರಿಯ ಕಾರ್ಯಕರ್ತರು ವಿಡಿಯೋವನ್ನು ಪೊಲೀಸರ ಗಮನಕ್ಕೆ ತಂದಿದ್ದಾರೆ. ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿದೆ. ಮೊದಲಿಗೆ ತನ್ನ ಮೇಲಿನ ಆರೋಪವನ್ನು ಒಪ್ಪಿಕೊಳ್ಳದ ಆರೋಪಿ ವಿಡಿಯೋ ನೋಡಿದ ನಂತರ ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...