ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿರುವ ಮುಹೂರ್ತ ಕುರಿತಾಗಿ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಅಶುಭ ಮುಹೂರ್ತದಲ್ಲಿ ಶಿಲಾನ್ಯಾಸಕ್ಕೆ ಮುಹೂರ್ತ ನಿಗದಿ ಮಾಡಿರುವುದಕ್ಕೆ ಅವರು ಆಕ್ಷೇಪಿಸಿದ್ದು ಶಿಲಾನ್ಯಾಸದ ಮುಹೂರ್ತವನ್ನು ಬದಲಿಸಬೇಕೆಂದು ಒತ್ತಾಯಿಸಿದ್ದಾರೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಧಾನಿಯವರಿಗೆ ಈ ಬಗ್ಗೆ ತಿಳಿಸಬೇಕೆಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಇದು ಅಶುಭ ಮುಹೂರ್ತವಾಗಿದೆ. ಬಿಜೆಪಿ ಹಿಂದುತ್ವ, ಸನಾತನ ಧರ್ಮ ಆಚಾರ-ವಿಚಾರಗಳನ್ನು ಗೌರವಿಸಿಲ್ಲ. ಪ್ರಧಾನಿ ಮೋದಿಯವರು ಎಲ್ಲವನ್ನು ಮರೆತು ಅವರೇ ಮುಹೂರ್ತ ನಿಗದಿ ಮಾಡುತ್ತಿದ್ದಾರೆ. ಅವರೇ ಶಿಲಾನ್ಯಾಸ ನೆರವೇರಿಸುತ್ತಿದ್ದಾರೆ. ರಾಮಮಂದಿರ ನಿರ್ಮಾಣಕ್ಕಾಗಿ ಪ್ರಾಣ ಕಳೆದುಕೊಂಡ ಕರಸೇವಕರ ಕುಟುಂಬದವರನ್ನು ಕಡೆಗಣಿಸಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ