alex Certify ವಾಣಿಜ್ಯ ನಗರಿ ಮುಂಬೈನಲ್ಲಿ ಅತ್ಯಂತ ಕಡಿಮೆ ತಾಪಮಾನ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಣಿಜ್ಯ ನಗರಿ ಮುಂಬೈನಲ್ಲಿ ಅತ್ಯಂತ ಕಡಿಮೆ ತಾಪಮಾನ ದಾಖಲು

ವಾಣಿಜ್ಯ ನಗರಿ ಮುಂಬೈ ಮಂಗಳವಾರ ಈ ಋತುವಿನ ಕಡಿಮೆ ತಾಪಮಾನ 16 ಡಿಗ್ರಿ ಸೆಲ್ಸಿಯಸ್​​ನಷ್ಟು ದಾಖಲಿಸಿದೆ ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಮುಂಬೈ ಹೊರತಾಗಿ ಮಹಾರಾಷ್ಟ್ರದ ಹಲವಾರು ಭಾಗಗಳಲ್ಲಿಯೂ ತಾಪಮಾನ ಕಡಿಮೆಯಾಗಿದ್ದು ಚಳಿ ಹಾಗೂ ಶೀತ ಗಾಳಿ ಬೀಸಿದೆ. ಇದು ಸಾಮಾನ್ಯ ತಾಪಮಾನಕ್ಕಿಂತ 2 ಡಿಗ್ರಿ ಕಡಿಮೆ ಎಂದು ಭಾರತೀಯ ಹವಾಮಾನ ಇಲಾಖೆ ಮುಂಬೈ ವಿಭಾಗದ ಉಪಮಹಾನಿರ್ದೇಶಕ ಕೆ.ಎಸ್.​ ಹೊಸಾಲಿಕರ್​ ಹೇಳಿದ್ದಾರೆ.

ಮುಂಬೈ ಪಕ್ಕದ ಥಾನೆ ಕನಿಷ್ಟ 18 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಿಸಿದೆ. ನಾಸಿಕ್​ನಲ್ಲಿ 8.4 ಡಿಗ್ರಿ ಸೆಲ್ಸಿಯಸ್​ ಹಾಗೂ ಜಲ್​​ಗಾವ್​​ನಲ್ಲಿ 9 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...