ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ್ದಾರೆ.
ನ್ಯಾಷನಲ್ ಡಿಜಿಟಲ್ ಮಿಷನ್ ಯೋಜನೆಯನ್ನು ಇಂದಿನಿಂದ ದೇಶದಲ್ಲಿ ಜಾರಿಗೊಳಿಸಲಾಗುವುದು ಎಂದು ಮೋದಿ ತಿಳಿಸಿದ್ದಾರೆ. ಇದು ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನೇ ಮಾಡುವ ಯೋಜನೆಯಾಗಿದೆ. ಕೇಂದ್ರ ಸರ್ಕಾರದ ನ್ಯಾಷನಲ್ ಡಿಜಿಟಲ್ ಹೆಲ್ಪ್ ಮಿಷನ್ ಯೋಜನೆಯಡಿಯಲ್ಲಿ ಭಾರತೀಯರಿಗೆ ಆರೋಗ್ಯ ಐಡಿ ಕಾರ್ಡ್ ನೀಡಲಾಗುವುದು ಎಂದು ಹೇಳಿದ್ದಾರೆ.
ಪ್ರತಿ ವ್ಯಕ್ತಿಯ ಹೆಸರಿನಲ್ಲಿ ಆರೋಗ್ಯ ಐಡಿ ಕಾರ್ಡ್ ಇರಲಿದ್ದು ಅವರ ಆರೋಗ್ಯ ತಪಾಸಣೆಗೆ ಸಂಬಂಧಿಸಿದ ಮಾಹಿತಿಯನ್ನು ಒಳಗೊಂಡಿರುತ್ತದೆ. ವ್ಯಕ್ತಿ ಒಮ್ಮೆ ಆರೋಗ್ಯ ತಪಾಸಣೆ ಹೇಗೆ ಒಳಗಾದ ನಂತರ ಆತನಿಗೆ ನೀಡಲಾಗುವ ಚಿಕಿತ್ಸಾ ವಿಧಾನಗಳ ಮಾಹಿತಿ ಮತ್ತು ಭವಿಷ್ಯದಲ್ಲಿ ನೀಡಬೇಕಿರುವ ಚಿಕಿತ್ಸೆಗಳ ಮಾಹಿತಿಯನ್ನು ಇದು ಒಳಗೊಂಡಿರುತ್ತದೆ. ದೇಶದ ಜನರ ಆರೋಗ್ಯದ ದೃಷ್ಟಿಯಿಂದ ಇದೊಂದು ಮಹತ್ವದ ಯೋಜನೆಯಾಗಿದೆ ಎಂದು ತಿಳಿಸಿದ್ದು, ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಸಾಕ್ಷಿಯಾಗಲಿದೆ ಎಂದು ಹೇಳಿದ್ದಾರೆ.