ನವದೆಹಲಿ: ದೇಶಾದ್ಯಂತ 74 ನೇ ಸ್ವಾತಂತ್ರೋತ್ಸವ ಸಂಭ್ರಮ ಮನೆ ಮಾಡಿದ್ದು, ಕೊರೋನಾ ಕಾರಣದಿಂದ ಸರಳವಾಗಿ ಆಚರಿಸಲಾಗುತ್ತಿದೆ.
ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ.
ಸತತ ಏಳನೇ ಬಾರಿಗೆ ಅವರು ಧ್ವಜಾರೋಹಣ ಮಾಡಿದ್ದಾರೆ. ಮೊದಲಿಗೆ ರಾಜಘಾಟ್ ಗೆ ತೆರಳಿ ಮಹಾತ್ಮ ಗಾಂಧೀಜಿ ಸ್ಮಾರಕಕ್ಕೆ ನಮನ ಸಲ್ಲಿಸಿದ ಮೋದಿ ಬಳಿಕ ರಕ್ಷಣಾ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿದ್ದಾರೆ.