ನವದೆಹಲಿ: ಭಾರತದಲ್ಲಿ ಕೊರೊನಾಗೆ ಮೂರು ಲಸಿಕೆಗಳು ಪರೀಕ್ಷೆಯ ಹಂತದಲ್ಲಿದ್ದು ವಿಜ್ಞಾನಿಗಳು ಗ್ರೀನ್ ಸಿಗ್ನಲ್ ನೀಡಿದ ನಂತರ ಲಸಿಕೆಯನ್ನು ದೊಡ್ಡ ಪ್ರಮಾಣದಲ್ಲಿ ಉತ್ಪಾದನೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
74ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ ಮೋದಿ, ಇಂದಿನಿಂದ ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ಆರಂಭಿಸಲಾಗುವುದು. ಇದು ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನೇ ಮಾಡಲಿದೆ ಎಂದು ತಿಳಿಸಿದ್ದಾರೆ.
ಆತ್ಮ ನಿರ್ಭರ್ ಭಾರತ, ಆಧುನಿಕತೆ, ನೂತನತೆ ಮತ್ತು ಸಮೃದ್ಧತೆಯಿಂದ ಭಾರತವನ್ನು ನಿರ್ಮಿಸುವಲ್ಲಿ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ. ಮೂರು ದಶಕದ ನಂತರ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಚುನಾವಣೆ ನಡೆಯಲಿದೆ. 370 ನೇ ವಿಧಿ ರದ್ದುಗೊಳಿಸಿ ಒಂದು ವರ್ಷವಾಗಿದ್ದು ಲಡಾಖ್ ಜನರ ಬಹು ವರ್ಷಗಳ ಕನಸನ್ನು ನನಸು ಮಾಡಲಾಗಿದೆ ಎಂದು ತಿಳಿಸಿದ್ದಾರೆ.