alex Certify ಬಿಗ್ ನ್ಯೂಸ್: ಸ್ಥಳೀಯವಾಗಿಯೇ ತಯಾರಾಗಿದೆ ಕೊರೊನಾ ಟೆಸ್ಟ್ ಕಿಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಸ್ಥಳೀಯವಾಗಿಯೇ ತಯಾರಾಗಿದೆ ಕೊರೊನಾ ಟೆಸ್ಟ್ ಕಿಟ್

ಇಡೀ ವಿಶ್ವಕ್ಕೆ ಮಾರಣಾಂತಿಕವಾಗಿ ಪರಿಣಮಿಸಿರುವ ಕೊರೊನಾ ವೈರಸ್ ಭಾರತದಲ್ಲೂ ತನ್ನ ಆರ್ಭಟ ಮುಂದುವರೆಸಿದೆ. ಈ ಮಹಾಮಾರಿಗೆ ಈಗಾಗಲೇ ನೂರಾರು ಮಂದಿ ಸಾವನ್ನಪ್ಪಿದ್ದು, ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ.

ಕೊರೊನಾ ನಿಯಂತ್ರಣಕ್ಕಾಗಿ ಪರೀಕ್ಷೆಯನ್ನು ಹೆಚ್ಚಳ ಮಾಡಬೇಕೆಂಬ ಕೂಗು ಕೇಳಿಬರುತ್ತಿತ್ತಾದರೂ ಈವರೆಗೆ ಟೆಸ್ಟಿಂಗ್ ಕಿಟ್ ಗಳಿಗಾಗಿ ವಿದೇಶವನ್ನು ಅವಲಂಬಿಸಬೇಕಾಗಿತ್ತು.

ಆದರೆ ಇದೀಗ ಸಿಹಿ ಸುದ್ದಿಯೊಂದು ಸಿಕ್ಕಿದ್ದು, ಪುಣೆ ಮೂಲದ ಸಂಸ್ಥೆಯೊಂದು ಸ್ಥಳೀಯವಾಗಿಯೇ ಕೊರೊನಾ ಟೆಸ್ಟ್ ಕಿಟ್ ಸಿದ್ಧಪಡಿಸಿದೆ. ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಸ್ವತಃ ಟ್ವೀಟ್ ಮಾಡುವ ಮೂಲಕ ಇದನ್ನು ಖಚಿತಪಡಿಸಿದ್ದಾರೆ.

— Dr Harsh Vardhan (@drharshvardhan) May 10, 2020

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...