alex Certify ಸಿ ವೋಟರ್ ಸಮೀಕ್ಷೆಯಲ್ಲಿ ಬಿಹಾರ ಚುನಾವಣೆ ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿ ವೋಟರ್ ಸಮೀಕ್ಷೆಯಲ್ಲಿ ಬಿಹಾರ ಚುನಾವಣೆ ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ

NDA to form govt again in Bihar, BJP may get maximum seats: ABP-CVoter opinion poll - bihar election - Hindustan Times

ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರವನ್ನು ತನ್ನಲ್ಲೇ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ABP-CVoter ಸಮೀಕ್ಷೆ ಭವಿಷ್ಯ ನುಡಿದಿದೆ.

ಚುನಾವಣಾ ಪೂರ್ವ ಸಮೀಕ್ಷೆಯ ವರದಿ ಕೊಟ್ಟಿರುವ ABP-CVoter, 243 ಸದಸ್ಯರ ಬಿಹಾರ ಅಸೆಂಬ್ಲಿಯಲ್ಲಿ ಎನ್‌ಡಿಎಗೆ 135-159 ಕ್ಷೇತ್ರಗಳಲ್ಲಿ ಗೆಲುವು ದೊರಕುವ ಸಾಧ್ಯತೆ ಇದ್ದು, ಕಾಂಗ್ರೆಸ್-ಆರ್‌ಜೆಡಿ ನೇತೃತ್ವದ ಮಹಾಘಟನಬಂಧನಕ್ಕೆ 77-98 ಸೀಟುಗಳು ಸಿಗುವ ಸಾಧ್ಯತೆ ಇದೆ ಎಂದಿದೆ.

ಇದೇ ವೇಳೆ, ಎನ್‌ಡಿಎ ಬಣಕ್ಕೆ 43% ಮತಗಳು ಹಾಗೂ ಮಹಾಘಟನಬಂಧನಕ್ಕೆ 35% ಮತಗಳು ಹಂಚಿಕೆಯಾಗುವ ಸಾಧ್ಯತೆ ಇದೆ ಎಂದು ಸಮೀಕ್ಷೆ ತಿಳಿಸುತ್ತಿದೆ.

ಏಕೈಕ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಲಿದ್ದು, 73-81 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದಿರುವ ಸಮೀಕ್ಷೆ, ಜೆಡಿಯು 59-67 ಸೀಟುಗಳನ್ನು ತನ್ನದಾಗಿಸಿಕೊಳ್ಳಲಿದೆ ಎಂದಿದೆ. ಇದೇ ವೇಳೆ ಆರ್‌ಜೆಡಿಗೆ 56-64 ಹಾಗೂ ಕಾಂಗ್ರೆಸ್‌ಗೆ 12-20 ಕ್ಷೇತ್ರಗಳಲ್ಲಿ ಗೆಲುವು ಸಿಗುವ ಸಾಧ್ಯತೆ ಇದೆ ಎಂದು ಸಿವೋಟರ್‌ ಸಮೀಕ್ಷೆ ವರದಿ ಮಾಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...