ನೀಟ್ ಮತ್ತು ಜೆಇಇ ಪರೀಕ್ಷೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪರೀಕ್ಷೆ ರದ್ದು ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ ಮೇನ್ಸ್ ಮುಂದೂಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ, ಪರೀಕ್ಷೆ ನಡೆಸಲು ಒಪ್ಪಿಗೆ ನೀಡಿದೆ.
ಅರ್ಜಿ ವಿಚಾರಣೆ ವೇಳೆ ದೇಶದಲ್ಲಿ ಎಲ್ಲವನ್ನೂ ನಿಲ್ಲಿಸಬೇಕಾ ಎಂದು ಪ್ರಶ್ನೆ ಮಾಡಿದೆ. ಒಂದು ಅಮೂಲ್ಯ ವರ್ಷ ಹಾಳಾಗಬೇಕಾ ಎಂದು ಪ್ರಶ್ನೆ ಮಾಡಿದೆ. ಕೊರೊನಾ ಸೊಂಕು ಹೆಚ್ಚಾಗ್ತಿರುವ ಕಾರಣ ಸೆಪ್ಟೆಂಬರ್ ನಲ್ಲಿ ನಡೆಯಬೇಕಿದ್ದ ಪರೀಕ್ಷೆ ನಿಲ್ಲಿಸುವಂತೆ ಕೋರಲಾಗಿತ್ತು. ಜೆಇಇ ಪರೀಕ್ಷೆ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 6 ರವರೆಗೆ ನಡೆಯಲಿದೆ. ನೀಟ್ ಪರೀಕ್ಷೆ ಸೆಪ್ಟೆಂಬರ್ 13 ರಂದು ನಡೆಯಲಿದೆ. ಈ ಪರೀಕ್ಷೆಯನ್ನು ಮುಂದೂಡಬೇಕೆಂದು 11 ರಾಜ್ಯಗಳ 11 ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.