alex Certify ಕೊನೆಯಾಗಲಿದೆ ನೀಟ್ –ಪಿಜಿ, ಜಾರಿಗೆ ಬರಲಿದೆ ಎನ್ಇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊನೆಯಾಗಲಿದೆ ನೀಟ್ –ಪಿಜಿ, ಜಾರಿಗೆ ಬರಲಿದೆ ಎನ್ಇಟಿ

ನವದೆಹಲಿ: ವೈದ್ಯಕೀಯ ಸ್ನಾತಕೋತರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್ –ಪಿಜಿ) ಬದಲಿಗೆ ನ್ಯಾಷನಲ್ ಎಕ್ಸಿಟ್ ಟೆಸ್ಟ್(NET) ಜಾರಿಗೆ ಬರುವ ಸಾಧ್ಯತೆ ಇದೆ.

ಮುಂದಿನ ವರ್ಷದ ಏಪ್ರಿಲ್ -ಮೇ ನಲ್ಲಿ ನಡೆಯಲಿರುವ ನೀಟ್ ಪಿಜಿ ಪರೀಕ್ಷೆಯೇ ಕೊನೆಯಾಗಲಿದೆ ಎಂದು ಹೇಳಲಾಗಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗದ ಉನ್ನತ ಮಟ್ಟದ ಸಭೆ ಇತ್ತೀಚೆಗೆ ನಡೆದಿದ್ದು, ಈ ಸಭೆಯಲ್ಲಿ ಮುಂದಿನ ವರ್ಷದ ಏಪ್ರಿಲ್ -ಮೇ ನಲ್ಲಿ ನಡೆಯಲಿರುವ ನೀಟ್ -ಪಿಜಿ ಪರೀಕ್ಷೆ ಕೊನೆ ಮಾಡುವ ಬಗ್ಗೆ ಚರ್ಚೆ ನಡೆಸಿದೆ.

ನೀಟ್ -ಪಿಜಿ ಬದಲಿಗೆ ನ್ಯಾಷನಲ್ ಎಕ್ಸಿಟ್ ಟೆಸ್ಟ್ ನಡೆಸಲು ಚರ್ಚೆ ನಡೆದಿದ್ದು, 2023 ಡಿಸೆಂಬರ್ ನಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...