ನವದೆಹಲಿ: ರೈತರಿಗೆ ವಾರ್ಷಿಕ 6000 ರೂ. ನೀಡುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳ ನೂತನ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ರಾಜ್ಯದಲ್ಲಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ಕೇಂದ್ರದಿಂದ 6000 ರೂ. ನೀಡಲಿದ್ದು ರಾಜ್ಯ ಸರ್ಕಾರ 4000 ರೂಪಾಯಿ ನೀಡಲಿದೆ. ರಾಜ್ಯದಲ್ಲಿ 51 ಲಕ್ಷಕ್ಕೂ ಹೆಚ್ಚು ಮಂದಿ ಯೋಜನೆಯ ಫಲಾನುಭವಿಗಳಾಗಿದ್ದಾರೆ.
ಕಿಸಾನ್ ಸಮ್ಮಾನ್ ಯೋಜನೆಗೆ ನೋಂದಾಯಿಸಿದ ಫಲಾನುಭವಿಗಳಿಗೆ pmkisan.gov.in ವೆಬ್ ಸೈಟ್ ನಲ್ಲಿ ಮಾಹಿತಿ ಸಿಗಲಿದೆ. ವೆಬ್ ಸೈಟ್ ನಲ್ಲಿ ಫಾರ್ಮರ್ ಕಾರ್ನರ್ ಟ್ಯಾಬ್ ನಲ್ಲಿ ರಾಜ್ಯ, ಜಿಲ್ಲೆ, ಉಪ ವಿಭಾಗ, ಬ್ಲಾಕ್ ಗ್ರಾಮದ ಹೆಸರನ್ನು ನಮೂದಿಸಿದರೆ ಪಟ್ಟಿ ಸಿಗುತ್ತದೆ. ಮೊಬೈಲ್ ಅಥವಾ ಆಧಾರ್ ಸಂಖ್ಯೆಯನ್ನು ನಮೂದಿಸಿ ಫಲಾನುಭವಿಗಳ ಪಟ್ಟಿಯನ್ನು ಪರೀಕ್ಷಿಸಬಹುದಾಗಿದೆ ಎಂದು ಹೇಳಲಾಗಿದೆ.