ಕೊರೊನಾ ವೈರಸ್ ವೇಗ ಹೆಚ್ಚಾಗಿದೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಪರಿಸ್ಥಿತಿ ಆತಂಕವುಂಟು ಮಾಡಿದೆ. ಕೊರೊನಾ ನಿಯಮ ಪಾಲಿಸುವಂತೆ ಜನರಿಗೆ ಮನವಿ ಮಾಡಲಾಗ್ತಿದೆ. ಆದ್ರೆ ಜನರು ನಿರ್ಲಕ್ಷ್ಯ ಮಾಡ್ತಿದ್ದು, ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಗಮನದಲ್ಲಿಟ್ಟುಕೊಂಡು ದೆಹಲಿ ಸರ್ಕಾರ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ. ರಾತ್ರಿ ಕರ್ಫ್ಯೂ ಇಂದಿನಿಂದಲೇ ಜಾರಿಗೆ ಬರಲಿದೆ. ಕರ್ಫ್ಯೂ ಸಮಯ ರಾತ್ರಿ ಹತ್ತು ಗಂಟೆಯಿಂದ ಬೆಳಿಗ್ಗೆ ಐದು ಗಂಟೆಯವರೆಗೆ ಇರಲಿದೆ. ಏಪ್ರಿಲ್ 30 ರವರೆಗೆ ಈ ನಿಯಮ ಜಾರಿಯಲ್ಲಿರಲಿದೆ.
ದೆಹಲಿಯಲ್ಲಿ ಸೋಮವಾರ 3,548 ಹೊಸ ಪ್ರಕರಣ ದಾಖಲಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 6,79,962 ಕ್ಕೆ ತಲುಪಿದೆ. ಕೋವಿಡ್ -19 ತಡೆಯಲು ದೆಹಲಿ ಸರ್ಕಾರ ಶೀಘ್ರದಲ್ಲೇ ರಾಷ್ಟ್ರ ರಾಜಧಾನಿಯಲ್ಲಿ ಮೈಕ್ರೊ ಕಂಟೈನ್‌ಮೆಂಟ್ ವಲಯವನ್ನು ರಚಿಸಲಿದೆ. ಕೊರೊನಾ ನಿಯಂತ್ರಣಕ್ಕೆ ದೆಹಲಿಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ಅನೇಕ ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳ ಮೇಲೂ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಮತ್ತು ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಗುತ್ತಿದೆ.