alex Certify ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ದಾರುಣ ಸಾವು: 27 ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ದಾರುಣ ಸಾವು: 27 ಮಂದಿಗೆ ಗಾಯ

ಬಸ್ಸು ಹಾಗೂ ಟ್ರಕ್​​ ಡಿಕ್ಕಿಯಾದ ಪರಿಣಾಮ 9 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬಾರಬಂಕಿಯಲ್ಲಿ ನಡೆದಿದೆ. ಅಪಘಾತದಲ್ಲಿ 27 ಮಂದಿ ಗಾಯಗೊಂಡಿದ್ದಾರೆ. ದೇವಾ ಪೊಲೀಸ್​ ಠಾಣೆ ಸಮೀಪದ ಕಿಸಾನ್​ ಪಥ್​​ ಬಬುರಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಸ್ಥಳೀಯರ ಪೊಲೀಸರು ಮಾಹಿತಿ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡರವನ್ನು ತುರ್ತು ಚಿಕಿತ್ಸಾ ವಿಭಾಗದಲ್ಲಿ ದಾಖಲಿಸಲಾಗಿದೆ.

ದೆಹಲಿಯಿಂದ ಉತ್ತರ ಪ್ರದೇಶದ ಬಹ್ರಿಚ್​​ಗೆ ಪ್ರಯಾಣಿಸುತ್ತಿದ್ದ ಬಸ್ಸು ಮರಳು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​​ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಹಾಗೂ ಗಾಯಾಳುಗಳಿಗೆ ಚಿಕಿತ್ಸೆಗೆ 50 ಸಾವಿರ ರೂಪಾಯಿ ನೀಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...