ಕೇಂದ್ರ ಸರ್ಕಾರದ ಮಾರ್ಗ ಸೂಚಿಯಂತೆ ಕೊರೊನಾ ಲಸಿಕೆ ವಿತರಣಾ ಕಾರ್ಯಕ್ರಮ ನಡೆಸಲು ನಾವು ಸಜ್ಜಾಗಿದ್ದೇವೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ಕೇಂದ್ರ ಸರ್ಕಾರದ ಸೂಚನೆಯಂತೆ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಹಾಗೂ 50 ವರ್ಷ ಮೇಲ್ಪಟ್ಟವರಿಗೆ ವಿತರಿಸಲಾಗುವುದು ಎಂದೂ ಇದೇ ವೇಳೆ ಹೇಳಿದ್ರು.
ಬಿಜೆಪಿಯ ಲಸಿಕೆಯನ್ನು ನಾನು ನಂಬೋದಿಲ್ಲ ಎಂದು ಹೇಳಿದ್ದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಗೆ ತಿರುಗೇಟು ನೀಡಿದ ನಿತೀಶ್ ಕುಮಾರ್, ಈ ರೀತಿಯ ಅಸಮಂಜಸ ಹೇಳಿಕೆಗಳನ್ನ ನೀಡುವ ಮೂಲಕ ಸಮಾಜವಾದಿ ಪಕ್ಷದ ಮುಖಂಡರು ಸುದ್ದಿಯಲ್ಲಿರಲು ಬಯಸುತ್ತಾರೆ ಎಂದು ಟೀಕಿಸಿದ್ರು.