ರಾಜಕೀಯಕ್ಕೆ ಎಂಟ್ರಿ ಕೊಡುವ ಮಾತೇ ಇಲ್ಲ ಪ್ರತಿಭಟನಾನಿರತ ಫ್ಯಾನ್ಸ್ಗೆ ರಜನಿ ಸ್ಪಷ್ಟ ಸಂದೇಶ 11-01-2021 4:15PM IST / No Comments / Posted In: Latest News, India ಸೂಪರ್ ಸ್ಟಾರ್ ರಜಿನಿಕಾಂತ್ ರಾಜಕೀಯಕ್ಕೆ ಪ್ರವೇಶ ಮಾಡುವಂತೆ ಒತ್ತಾಯಿಸಿ ಅಭಿಮಾನಿಗಳು ನಡೆಸುತ್ತಿರುವ ಪ್ರತಿಭಟನಾ ವಿಚಾರವಾಗಿ ಪ್ರತಿಕ್ರಿಯಿಸಿರುವ ತಲೈವಾ ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರುವ ಪ್ರಶ್ನೆಯಿಲ್ಲ. ದಯವಿಟ್ಟು ಈ ಪ್ರತಿಭಟನೆ ಕೈ ಬಿಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಆರೋಗ್ಯದ ಮುಂದೆ ಯಾವುದೂ ಇಲ್ಲ. ನಾನು ಈಗಾಗಲೇ ರಾಜಕೀಯಕ್ಕೆ ಎಂಟ್ರಿ ಕೊಡದರ ಬಗ್ಗೆ ಸ್ಪಷ್ಟ ಕಾರಣಗಳನ್ನ ನೀಡಿದ್ದೇನೆ. ಈ ವಿಚಾರದಲ್ಲಿ ನನ್ನ ನಿರ್ಧಾರ ಅಚಲವಾಗಿದೆ. ಹೀಗಾಗಿ ನನಗೆ ರಾಜಕೀಯಕ್ಕೆ ಬರುವಂತೆ ಒತ್ತಾಯಿಸಿ ಪ್ರತಿಭಟನೆಗಳನ್ನ ನಡೆಸಿ ನನ್ನ ಮನಸ್ಸಿಗೆ ನೋವುಂಟು ಮಾಡಬೇಡಿ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ. ಡಿಸೆಂಬರ್ 31ರಂದು ತಮಿಳು ನಟ ರಜನಿಕಾಂತ್ ತಮ್ಮ ರಜಿನಿ ಮಕ್ಕಳ್ ಮಂಡ್ರಂ ಪಕ್ಷದ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡೋದಾಗಿ ಘೋಷಣೆ ಮಾಡಿದ್ದರು. ಆದರೆ ಇದಾದ ಬಳಿಕ ಅವರ ಆರೋಗ್ಯ ಹದಗೆಟ್ಟಿದ್ದರಿಂದ ತಮ್ಮ ರಾಜಕೀಯ ಪ್ರವೇಶ ನಿರ್ಧಾರವನ್ನ ಹಿಂಪಡೆದಿದ್ದರು. pic.twitter.com/NVExYcjxN9 — Rajinikanth (@rajinikanth) January 11, 2021