ನವದೆಹಲಿ: ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಜಾರಿ ಮಾಡಲಾಗಿದ್ದ ಲಾಕ್ ಡೌನ್ ಹಂತಹಂತವಾಗಿ ತೆರವುಗೊಳಿಸಲಾಗಿದ್ದು ಅನ್ಲಾಕ್ ಪ್ರಕ್ರಿಯೆ ಜಾರಿಯಲ್ಲಿದೆ.
ಇದೇ ವೇಳೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಅನೇಕ ರಾಜ್ಯಗಳಲ್ಲಿ ಕೊರೋನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಂತರರಾಜ್ಯ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಇದಕ್ಕೆ ಆಕ್ಷೇಪಿಸಿರುವ ಕೇಂದ್ರ ಸರ್ಕಾರ ಸಂಚಾರಕ್ಕೆ ನಿರ್ಬಂಧ ಹೇರಬಾರದು ಎಂದು ಸೂಚನೆ ನೀಡಿದೆ.
ವ್ಯಕ್ತಿಗಳು ಅಥವಾ ಸರಬರಾಜು ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಕೇಂದ್ರ ಗೃಹ ಸಚಿವಾಲಯದ ವತಿಯಿಂದ ಮಾರ್ಗಸೂಚಿ ಹೊರಡಿಸಲಾಗಿದೆ. ರಾಜ್ಯಗಳು ತಮಗೆ ತಿಳಿದಂತೆ ಮಾರ್ಗಸೂಚಿ ಅಳವಡಿಸಬಾರದು ಎಂದು ಹೇಳಲಾಗಿದೆ.
ಲಾಕ್ಡೌನ್ ಸಡಿಲಿಕೆ ಮಾಡಿದ ಸಂದರ್ಭದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ್ದ ಕೇಂದ್ರ ಸರ್ಕಾರ ಅನ್ಲಾಕ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು ಇ -ಪರವಾನಿಗೆ ಹೊಂದಿದ ವಾಹನಗಳಿಗೆ ಅಂತರಾಜ್ಯ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ನಂತರ ಸಂಪೂರ್ಣ ನಿರ್ಬಂಧ ತೆಗೆದು ಹಾಕಲಾಗಿದ್ದು, ಅಂತರರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ಇರಬಾರದು ಎಂದು ತಿಳಿಸಲಾಗಿದೆ.