ಸರ್ಕಾರಿ ಶಾಲೆಯಲ್ಲಿ ಪಿಯುಸಿ ವಿದ್ಯಾಭ್ಯಾಸ ಪೂರೈಸಿರುವ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿ ನೀಡಲು ಓಡಿಶಾ ಸರ್ಕಾರ ನಿರ್ಧಾರ ಕೈಗೊಂಡಿದೆ. ಎಲ್ಲಾ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ಪ್ರತಿ ವರ್ಷ ಆಸ್ತಿ ಘೋಷಣೆ ಮಾಡೋದು ಕಡ್ಡಾಯಗೊಳಿಸುವ ಪ್ರಸ್ತಾಪಕ್ಕೂ ಮುನ್ನ ಈ ಅನುಮೋದನೆ ನೀಡಿದೆ.
ಓಡಿಶಾ ಸಿಎಂ ನವೀನ್ ಪಟ್ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಪ್ರಸ್ತಾಪಗಳನ್ನ ಅಂಗೀಕರಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಪೂರೈಸಿದ ವಿಧ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಈ ವಿಶೇಷ ಕೋಟಾವನ್ನ ಪರಿಚಯಿಸಲಿದ್ದೇವೆ ಎಂದು ಶಾಲಾ ಹಾಗೂ ಸಮೂಹ ಶಿಕ್ಷಣ ಸಚಿವ ಎಸ್. ಆರ್. ದಾಶ್ ಹೇಳಿದ್ರು.
ನಗರ ಪ್ರದೇಶಗಳಲ್ಲಿ ಸುಲಭವಾಗಿ ಲಭ್ಯವಿರುವ ಕೋಚಿಂಗ್ ಹಾಗೂ ಡಿಜಿಟಲ್ ಕೋರ್ಸ್ಗಳಿಂದ ವಂಚಿತರಾದ ಗ್ರಾಮೀಣ ವಿದ್ಯಾರ್ಥಿಗಳ ಮನೋಸ್ಥೈರ್ಯವನ್ನ ಹೆಚ್ಚಿಸೋದು ಈ ಮೀಸಲಾತಿಯ ಉದ್ದೇಶವಾಗಿದೆ ಎಂದು ಒಡಿಶಾ ಸರ್ಕಾರ ಹೇಳಿದೆ.