ಹೈದರಾಬಾದ್: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಜನರ ಗುಂಪಿನ ಮೇಲೆ ಲಾರಿ ಹರಿದ ಪರಿಣಾಮ ನಾಲ್ವರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಝಾನ್ಸಿ, ವಂಶಿ, ಹರ್ಷವರ್ಧನ್ ಹಾಗೂ ಸುಶ್ಮಿತಾ ಮೃತ ಮಕ್ಕಳು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿ ಚಾಲಕನ ಬೇಜವಾಬ್ದಾರಿಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.