
ರಾಯಗಢ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹಾತ್ ನಲ್ಲಿ 5 ಅಂತಸ್ತಿನ ಕಟ್ಟಡ ಕುಸಿದು ಒಬ್ಬರು ಮೃತಪಟ್ಟಿದ್ದು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕುಸಿದುಬಿದ್ದ ಕಟ್ಟಡ ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ಇದ್ದು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಅವಶೇಷಗಳಡಿಯಿಂದ ಈಗಾಗಲೇ ಆರು ಮಂದಿಯನ್ನು ರಕ್ಷಿಸಲಾಗಿದೆ.
ಎನ್.ಡಿ.ಆರ್.ಎಫ್. ಸೇರಿದಂತೆ ಮೂರು ರಕ್ಷಣ ತಂಡಗಳಿಂದ ಕಾರ್ಯಾಚರಣೆ ಮುಂದುವರೆದಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸುವಂತೆ ಸೂಚನೆ ನೀಡಿದ್ದಾರೆ. 45 ಫ್ಲ್ಯಾಟ್ ಗಳಿದ್ದ ಕಟ್ಟಡ ಶಿಧಿಲಗೊಂಡಿದ್ದ ಕಾರಣ ಏಕಾಏಕಿ ಕುಸಿದು ಬಿದ್ದಿದೆ ಎನ್ನಲಾಗಿದೆ.