alex Certify ದೇಶದ ವಿದ್ಯಾರ್ಥಿಗಳಿಗೆ ಮೋದಿ ಸರ್ಕಾರದಿಂದ ʼಗುಡ್ ನ್ಯೂಸ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ವಿದ್ಯಾರ್ಥಿಗಳಿಗೆ ಮೋದಿ ಸರ್ಕಾರದಿಂದ ʼಗುಡ್ ನ್ಯೂಸ್ʼ

ನವದೆಹಲಿ: ಪ್ರಧಾನಮಂತ್ರಿ ಇ -ವಿದ್ಯಾ ಯೋಜನೆಯನ್ನು ಡಿಜಿಟಲ್ ಶಿಕ್ಷಣಕ್ಕಾಗಿ ಆರಂಭಿಸಲಾಗುತ್ತಿದೆ. ಇದಕ್ಕಾಗಿ ವಿಶ್ವವಿದ್ಯಾಲಯಗಳಲ್ಲಿ ಆನ್ಲೈನ್ ಕೋರ್ಸ್ ಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು.

ದೇಶದ ಟಾಪ್ 100 ವಿಶ್ವವಿದ್ಯಾಲಯಗಳಿಗೆ ಆನ್ಲೈನ್ ಶಿಕ್ಷಣಕ್ಕೆ ಅನುಮತಿ ನೀಡಲಾಗುವುದು. ದೀಕ್ಷಾ ಒನ್ ನೇಷನ್ ಒನ್ ಡಿಜಿಟಲ್ ಪ್ಲಾಟ್ ಫಾರಂ ರೂಪಿಸಲಾಗುವುದು. ಡಿಜಿಟಲ್ ಶಿಕ್ಷಣಕ್ಕಾಗಿ ಪ್ರಧಾನಮಂತ್ರಿ ಇ -ವಿದ್ಯಾ ಯೋಜನೆ ಜಾರಿಗೆ ತರಲಿದ್ದು, ದಿವ್ಯಾಂಗರಿಗಾಗಿ ಪ್ರತ್ಯೇಕ ಪಠ್ಯಪುಸ್ತಕ ರಚಿಸಲಾಗುವುದು. ಆನ್ಲೈನ್ ಕೋರ್ಸ್ ಗಳಿಗೆ ಹೆಚ್ಚಿನ ಒತ್ತು ನೀಡುವ ಜೊತೆಗೆ ಟಾಪ್ 100 ವಿವಿಗಳಿಗೆ ಆನ್ಲೈನ್ ಶಿಕ್ಷಣಕ್ಕೆ ಅನುಮತಿ ನೀಡಲಾಗುವುದು. ಶಿಕ್ಷಣಕ್ಕಾಗಿ ಪ್ರತ್ಯೇಕ ವಾಹಿನಿ ಆರಂಭಿಸಲಿದ್ದು, ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೂ ಅನುಕೂಲವಾಗುವಂತೆ ಯೋಜನೆ ರೂಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಿಶೇಷ ಪ್ಯಾಕೇಜ್ ಮುಂದುವರೆದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ ಅವರು, ಆನ್ಲೈನ್ ಶಿಕ್ಷಣಕ್ಕೆ ಹೆಚ್ಚಿನ ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ಪ್ರತ್ಯೇಕ ವಾಹಿನಿ ಆರಂಭಿಸುವ ಜೊತೆಗೆ ತಾಂತ್ರಿಕತೆ, ಸೋಷಿಯಲ್ ಮೀಡಿಯಾ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...