ಮುಂಬೈನ ರಾಜವಾಡಿ ಲಸಿಕೆ ಕೇಂದ್ರಕ್ಕೆ ಬರುತ್ತಿರುವ ಜನರು ವಿಚಿತ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಆಧಾರ್ ಕಾರ್ಡ್ ಜೊತೆ ಪಾನ್ ಕಾರ್ಡ್ ಲಿಂಕ್ ಸಮಸ್ಯೆ ಅವರಿಗೆ ಎದುರಾಗಿದೆ. ಪಾನ್ ಜೊತೆ ಆಧಾರ್ ಲಿಂಕ್ ಮಾಡಿದವರಿಗೆ ಮಾತ್ರ ಲಸಿಕೆ ನೀಡಲಾಗ್ತಿದೆ. ಆದ್ರೆ ಕೇಂದ್ರಕ್ಕೆ ಲಸಿಕೆ ಪಡೆಯಲು ಬಂದವರಲ್ಲಿ ಕೆಲವೇ ಕೆಲವು ಮಂದಿ ಮಾತ್ರ ಪಾನ್-ಆಧಾರ್ ಲಿಂಕ್ ಮಾಡಿದ್ದರು ಎನ್ನಲಾಗಿದೆ. ಹಾಗಾಗಿ ಉಳಿದವರು ಸಮಸ್ಯೆ ಎದುರಿಸಿದ್ದಾರೆಂದು ವರದಿ ಮಾಡಲಾಗಿದೆ.
ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಚಿಕಿತ್ಸೆಗೆ ಬೆಡ್ ಸಮಸ್ಯೆ ಎದುರಾಗುತ್ತಿದೆ. ಮುಂದಿನ ಐದು-ಆರು ವಾರಗಳಲ್ಲಿ ಮುಂಬೈಯಲ್ಲಿ ಮೂರು ಜಂಬೊ ಫೀಲ್ಡ್ ಆಸ್ಪತ್ರೆಗಳನ್ನು ಸ್ಥಾಪಿಸುವುದಾಗಿ ಸರ್ಕಾರ ಘೋಷಿಸಿದೆ. ಈ ಮಧ್ಯೆ ಇಂಥ ವಿಚಿತ್ರ ನಿಯಮಗಳನ್ನು ಜಾರಿಗೆ ತರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋ-ವಿನ್ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಆದ್ರೆ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಿಕೊಂಡವರಿಗೆ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಲಸಿಕೆ ಹಾಕಿಸಿಕೊಳ್ಳಲು ಅವಕಾಶವಿದೆ. ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳದವರು ಮಧ್ಯಾಹ್ನ 3 ಗಂಟೆ ನಂತ್ರ ಲಸಿಕೆ ಹಾಕಿಸಿಕೊಳ್ಳಬೇಕು. ಆಧಾರ್ ಕಾರ್ಡ್ ಸೇರಿದಂತೆ ಯಾವುದಾದ್ರೊಂದು ಗುರುತಿನ ಚೀಟಿ ತೆಗೆದುಕೊಂಡು ಹೋಗಬೇಕು.