ಕೊರೊನಾ ಹಿನ್ನಲೆಯಲ್ಲಿ ಸಿಎಂ ನಿವಾಸಕ್ಕೆ 6 ವೈದ್ಯರ ನೇಮಕಕ್ಕೆ ಮುಂದಾದ ಬಿಹಾರ ಸರ್ಕಾರ 09-07-2020 4:38PM IST / No Comments / Posted In: Corona, Corona Virus News, India, Featured News ದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದು, ಜನ ಸಾಮಾನ್ಯರು ಸಕಾಲಕ್ಕೆ ಚಿಕಿತ್ಸೆ ಸಿಗದೆ ಪರಿತಪಿಸುತ್ತಿದ್ದಾರೆ. ಇದರ ಮಧ್ಯೆ ಬಿಹಾರ ಸರ್ಕಾರ ತೆಗೆದುಕೊಂಡಿರುವ ತೀರ್ಮಾನವೊಂದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಿಹಾರ ಸರ್ಕಾರದ ಆರೋಗ್ಯ ಇಲಾಖೆ ಕಾರ್ಯದರ್ಶಿ ಸೂಚನೆಯಂತೆ ಪಾಟ್ನಾ ಮೆಡಿಕಲ್ ಕಾಲೇಜು ಆಸ್ಪತ್ರೆ ವತಿಯಿಂದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಧಿಕೃತ ನಿವಾಸದಲ್ಲಿ ಕಾರ್ಯ ನಿರ್ವಹಿಸುವ ಸಲುವಾಗಿ 6 ಮಂದಿ ವೈದ್ಯರು, ಮೂವರು ನರ್ಸ್ ಗಳನ್ನು ನೇಮಕ ಮಾಡಲು ಆದೇಶ ಹೊರಡಿಸಲಾಗಿದ್ದು, ವೆಂಟಿಲೇಟರ್ ಸೇರಿದಂತೆ ಸಕಲ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ. ಕೋವಿಡ್ 19 ವ್ಯಾಪಿಸುತ್ತಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದ್ದು, ಇದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಭಾರೀ ಚರ್ಚೆ ನಡೆದಿದೆ. Bihar: Patna Medical College issues an order to deploy six doctors, three nurses, and a ventilator at the official residence of Bihar CM Nitish Kumar, after Secretary of the Health Department directed the hospital to do so as a precautionary measure against #COVID19 pic.twitter.com/pFbxigIKdf — ANI (@ANI) July 7, 2020