ತಾಂತ್ರಿಕ ಕಾರಣಗಳಿಂದ ನೂತನ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಟ್ಟಿರದ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. 2004ರ ಜನವರಿ 1 ರ ಮೊದಲೇ ಕೆಲಸಕ್ಕೆ ಸೇರಿಕೊಂಡಿದ್ದರು ತಾಂತ್ರಿಕ ಕಾರಣದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಲಕ್ಷಾಂತರ ನೌಕರರು ಹಳೆ ಪಿಂಚಣಿ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಅವರಿಗೆ ಹಳೆ ಪಿಂಚಣಿ ಸೌಲಭ್ಯ ಪಡೆಯಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ.
ಮೂರು ತಿಂಗಳ ಕಾಲಾವಕಾಶ ನೀಡಲಾಗಿದ್ದು ಇಲಾಖೆಗಳಲ್ಲಿ ನಿಯಮಾನುಸಾರ ಅರ್ಜಿ ಸಲ್ಲಿಸಿ ಹಳೆ ಪಿಂಚಣಿ ವ್ಯವಸ್ಥೆಗೆ ಬದಲಾವಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 2004 ರ ಜನವರಿ 1ರ ಮೊದಲೇ ಕೆಲಸಕ್ಕೆ ಸೇರಿ ರಾಜೀನಾಮೆ ನೀಡಿ ಮತ್ತೊಂದು ಹುದ್ದೆಗೆ ಆಯ್ಕೆಯಾಗಿರುವ ಸರ್ಕಾರಿ ನೌಕರರ ಹಿಂದಿನ ಸೇವೆಯನ್ನು ಪರಿಗಣಿಸಿ ಹಳೆ ಪಿಂಚಣಿ ವ್ಯವಸ್ಥೆಯಲ್ಲಿ ಮುಂದುವರಿಯಬಹುದು ಎಂದು ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಪಿಂಚಣಿ ಸಚಿವಾಲಯ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರದ ಆದೇಶದಿಂದ ರಾಜ್ಯ ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿ ಕೇಂದ್ರದ ಹುದ್ದೆಗೆ ಆಯ್ಕೆಯಾದವರು, 2004 ಮೊದಲೇ ಕೆಲಸಕ್ಕೆ ಸೇರಿ ರಾಜೀನಾಮೆ ನೀಡಿ ಮತ್ತೆ ಕೆಲಸಕ್ಕೆ ಸೇರಿದವರಿಗೆ, 2004 ರ ಮೊದಲೇ ಆಯ್ಕೆಯಾಗಿದ್ದರೂ, ವಿಳಂಬವಾಗಿ ನೇಮಕಾತಿ ಆದೇಶ ಪಡೆದವರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.