ನವದೆಹಲಿ: ನವದೆಹಲಿಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಪಡೆದಿದ್ದ ಮೊದಲ ವ್ಯಕ್ತಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
ದೆಹಲಿಯ 49 ವರ್ಷದ ವ್ಯಕ್ತಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದು, ಅವರಿಗೆ ಸಾಕೇತ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲಾಗಿದ್ದು ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಅವರು ಗುಣಮುಖರಾದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ದೆಹಲಿಯಲ್ಲಿ ಕೋರೋನಾ ಸೋಂಕು ತಡೆಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಿದ್ದು ಯಶಸ್ವಿಯಾಗಿದೆ. ರಾಜ್ಯದಲ್ಲಿಯೂ ನಿನ್ನೆಯಿಂದ ಪ್ಲಾಸ್ಮಾ ಚಿಕಿತ್ಸೆ ಆರಂಭವಾಗಿದೆ. ಗುಣಮುಖರಾದ ವ್ಯಕ್ತಿಯ ಪ್ಲಾಸ್ಮಾವನ್ನು ತೆಗೆದು ಸೋಂಕಿತ ವ್ಯಕ್ತಿಗೆ ನೀಡಲಾಗಿದ್ದು ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಸೋಂಕಿತ ವ್ಯಕ್ತಿ ಗುಣಮುಖರಾಗುತ್ತಾರೆ. ಕೇರಳ ಮತ್ತು ದೆಹಲಿಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾಗಿದ್ದು ರಾಜ್ಯದಲ್ಲಿಯೂ ನಿನ್ನೆಯಿಂದ ಈ ಮಾದರಿ ಚಿಕಿತ್ಸೆಗೆ ಚಾಲನೆ ನೀಡಲಾಗಿದೆ.