alex Certify BIG BREAKING: ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ -162 ಮೆಡಿಕಲ್ ಆಕ್ಸಿಜನ್ ಪ್ಲಾಂಟ್ ಸ್ಥಾಪನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ -162 ಮೆಡಿಕಲ್ ಆಕ್ಸಿಜನ್ ಪ್ಲಾಂಟ್ ಸ್ಥಾಪನೆ

ನವದೆಹಲಿ: ಪಿಎಂ ಕೇರ್ಸ್ ಫಂಡ್ ಟ್ರಸ್ಟ್ ವತಿಯಿಂದ ಸಾರ್ವಜನಿಕ ಆರೋಗ್ಯ ಸೌಲಭ್ಯ ಹೆಚ್ಚಿಸುವ ನಿಟ್ಟಿನಲ್ಲಿ 162 ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು 201.58 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ.

ಅಗತ್ಯ ಮತ್ತು ತುರ್ತುಪರಿಸ್ಥಿತಿಗಳಲ್ಲಿ ಪರಿಹಾರ ನೀಡುವ ಪಿಎಂ ಕೇರ್ಸ್ ನಿಂದ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಹಣ ವಿನಿಯೋಗಿಸಲಾಗುತ್ತದೆ. ಯೋಜನೆಯ ಕಾರ್ಯಾರಂಭಕ್ಕೆ 137.33 ಕೋಟಿ ರೂ. ಮತ್ತು ಸಮಗ್ರ ವಾರ್ಷಿಕ ನಿರ್ವಹಣೆಗೆ, ಉಪಕರಣಗಳಿಗೆ 64.25 ಕೋಟಿ ರೂಪಾಯಿ ಕಾಯ್ದಿರಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿರುವ ಕೇಂದ್ರ ವೈದ್ಯಕೀಯ ಸರಬರಾಜು ಸ್ಟೋರ್ ಇದನ್ನು ನಿರ್ವಹಿಸಲಿದೆ. ಇದರಿಂದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಅನುಕೂಲವಾಗುತ್ತದೆ.

ಮೆಡಿಕಲ್ ಆಕ್ಸಿಜನ್ ಪೂರೈಕೆಗೆ ಅನುಕೂಲವವಾಗುತ್ತದೆ. ಕರ್ನಾಟಕದಲ್ಲಿ 6, ಮಹಾರಾಷ್ಟ್ರ 10, ಉತ್ತರ ಪ್ರದೇಶ 10  ಸೇರಿದಮತೆ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 162 ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕ ಆರಂಭಿಸಲಾಗುವುದು ಎಂದು ಪ್ರಧಾನಮಂತ್ರಿ ಕಾರ್ಯಾಲಯದಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...