alex Certify 1 ವರ್ಷದ ಸಂಭ್ರಮದಲ್ಲಿ ಮೋದಿ 2.0 ಸರ್ಕಾರ, ಬಿಜೆಪಿಯಿಂದ ಭರ್ಜರಿ ತಯಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1 ವರ್ಷದ ಸಂಭ್ರಮದಲ್ಲಿ ಮೋದಿ 2.0 ಸರ್ಕಾರ, ಬಿಜೆಪಿಯಿಂದ ಭರ್ಜರಿ ತಯಾರಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಂದು ವರ್ಷ ಪೂರೈಸಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಅದ್ದೂರಿ ಸಂಭ್ರಮಾಚರಣೆ ಬದಲಿಗೆ ಜೂನ್ ತಿಂಗಳಿಡಿ ದೇಶಾದ್ಯಂತ 500 ಡಿಜಿಟಲ್ ರ್ಯಾಲಿ ಮತ್ತು 1000 ವಿಡಿಯೋ ಸಂವಾದಗಳನ್ನು ನಡೆಸಲು ಬಿಜೆಪಿಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕಳೆದ 1 ವರ್ಷದ ಅವಧಿಯಲ್ಲಿ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ ಸಂವಿಧಾನದ 370ನೇ ವಿಧಿ ರದ್ದು, ತ್ರಿವಳಿ ತಲಾಖ್ ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಸೇರಿದಂತೆ ಹಲವು ಪ್ರಮುಖ ಕಾರ್ಯಕ್ರಮಗಳನ್ನು ಜಾರಿಗೆ ತಂದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಐತಿಹಾಸಿಕ ಬಹುಮತದೊಂದಿಗೆ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷ ಆಗಿರುವ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

ಜೂನ್ ತಿಂಗಳಲ್ಲಿ ಡಿಜಿಟಲ್ ರ್ಯಾಲಿ, ವಿಡಿಯೋ ಸಂವಾದ ಸೇರಿದಂತೆ ಹಲವು ಕಾರ್ಯಕ್ರಮ ನಡೆಸಲಾಗುವುದು. ಈ ಮೂಲಕ ಸರ್ಕಾರದ ಸಾಧನೆಗಳನ್ನು ಪ್ರಚುರಪಡಿಸಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...