ನವದೆಹಲಿ: ಅನೇಕ ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ನೆರೆ ಹಾನಿಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಜನ ತತ್ತರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾಹಿತಿ ಪಡೆಯಲಿದ್ದಾರೆ.
ರಾಜ್ಯದಲ್ಲಿ ಭಾರಿ ಮಳೆಯಿಂದ ಗುಡ್ಡ ಕುಸಿದು, ಪ್ರವಾಹ ಉಂಟಾಗಿ ಅನಾಹುತ ಸಂಭವಿಸಿದೆ. ಬೆಳೆ, ಸೇತುವೆ, ಮನೆಗಳು ಹಾನಿಗೀಡಾಗಿವೆ. ಸಚಿವರಾದ ಬಸವರಾಜ ಬೊಮ್ಮಾಯಿ ಮತ್ತು ಆರ್. ಅಶೋಕ್ ಪ್ರಧಾನಿಯವರೊಂದಿಗಿನ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ರಾಜ್ಯದಲ್ಲಿ ಆಗಿರುವ ಹಾನಿಯ ಬಗ್ಗೆ ಮಾಹಿತಿ ನೀಡಿ ನೆರವು ತುರ್ತು ನೆರವಿಗೆ ಮನವಿ ಮಾಡಲಿದ್ದಾರೆ. ಸಚಿವರೊಂದಿಗೆ ಸಮಾಲೋಚನೆ ನಡೆಸಲಿರುವ ಮೋದಿ ತುರ್ತು ಪರಿಹಾರ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.