ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತೊಂದು ಸುತ್ತಿನ ಕಠಿಣ ಲಾಕ್ಡೌನ್ ಜಾರಿಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ಜೂನ್ 30 ರ ವರೆಗೂ ಲಾಕ್ಡೌನ್ ಮುಂದುವರೆದಿದ್ದರೂ ನಿರ್ಬಂಧಗಳನ್ನು ಸಡಿಲಿಕೆ ಮಾಡಿರುವುದರಿಂದ ಬಹುತೇಕ ಚಟುವಟಿಕೆಗಳು ಆರಂಭವಾಗಿವೆ. ಇದೇ ಸಂದರ್ಭದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹರಡುತ್ತಿದ್ದು ವಿಶ್ವದಲ್ಲಿ ಭಾರತ ನಾಲ್ಕನೇ ಸ್ಥಾನಕ್ಕೆ ಏರಿರುವುದು ಕಳವಳಕಾರಿಯಾಗಿದೆ.
ಸೋಂಕು ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಸಂಪೂರ್ಣ ನಿರ್ಬಂಧ ಜಾರಿಗೆ ಸೂಚನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಜೂನ್ 16 ಮತ್ತು 17ರಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಕೊರೋನಾ ಪ್ರಕರಣ ಕಡಿಮೆ ಇರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಜೂನ್ 16 ರಂದು ಸಭೆ ನಡೆಸಲಿದ್ದು, ಕೊರೋನಾ ಪ್ರಕರಣ ಜಾಸ್ತಿ ಇರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಜೂನ್ 17ರಂದು ಸಭೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಸಭೆಯಲ್ಲಿ ಕೊರೋನಾ ತಡೆಗೆ ಕಠಿಣ ಲಾಕ್ಡೌನ್ ಜಾರಿ ಮಾಡುವ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.