ನವದೆಹಲಿ: ದೇಶದಲ್ಲಿ ಲಾಕ್ಡೌನ್ ಸಡಿಲಿಕೆ ನಂತರವೂ ಕೊರೋನಾ ಪ್ರಕರಣಗಳು ವ್ಯಾಪಕವಾಗಿ ಏರಿಕೆಯಾಗುತ್ತಿವೆ.
ಇದೇ ಸಂದರ್ಭದಲ್ಲಿ ದೇಶದ ಜನರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಭಾಷಣ ಮಾಡಲಿದ್ದಾರೆ. ‘ಮನ್ ಕಿ ಬಾತ್’ 66 ನೇ ಆವೃತ್ತಿಯಲ್ಲಿ ತಮ್ಮ ಅನಿಸಿಕೆ ಹಂಚಿಕೊಳ್ಳಲಿರುವ ಮೋದಿ ಕೊರೋನಾ ಕುರಿತಾಗಿ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.
ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಜೂನ್ 30ರವರೆಗೆ ಲಾಕ್ ಡೌನ್ ಜಾರಿ ಮಾಡಲಾಗಿದ್ದು ಹಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಇಂದು 11 ಗಂಟೆಗೆ ‘ಮನ್ ಕಿ ಬಾತ್’ ನಲ್ಲಿ ಕೊರೋನಾ ತಡೆಯುವ ಬಗ್ಗೆ ಮಾಹಿತಿ ನೀಡಿ ಮೆಟ್ರೋ ಸಂಚಾರ, ಶಿಕ್ಷಣ ಸಂಸ್ಥೆಗಳ ಆರಂಭದ ಕುರಿತಾಗಿ ಪ್ರಸ್ತಾಪಿಸುವ ಸಾಧ್ಯತೆ ಇದೆ.
ಶಿಕ್ಷಣ ಸಂಸ್ಥೆಗಳನ್ನು ಆರಂಭಿಸುವ ನಿರ್ಧಾರವನ್ನು ರಾಜ್ಯ ಸರ್ಕಾರಗಳಿಗೆ ಬಿಡಲು ಕೇಂದ್ರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಸೋಂಕು ತಡೆಯುವ ನಿಟ್ಟಿನಲ್ಲಿ ದೇಶದ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸಬೇಕೆಂಬುದು ಸೇರಿದಂತೆ ಹಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಮತ್ತೊಮ್ಮೆ ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ.