alex Certify ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದ್ರೆ ಸಹಿಸಲ್ಲ, ಗುಡುಗಿದ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದ್ರೆ ಸಹಿಸಲ್ಲ, ಗುಡುಗಿದ ಮೋದಿ

ನವದೆಹಲಿ: ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಲಾಗುವುದು. ಪೊಲೀಸರು ನಮ್ಮ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ದೌರ್ಜನ್ಯ ನಡೆಸುವುದನ್ನು ಸಹಿಸಲು ಸಾಧ್ಯವಿಲ್ಲ. ವೈದ್ಯಕೀಯ ಸಿಬ್ಬಂದಿ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

‘ಮನ್ ಕಿ ಬಾತ್’ನಲ್ಲಿ ಇಂದು ಮಾತನಾಡಿದ ಅವರು, ದೇಶದಲ್ಲಿ ಯಾರೂ ಹಸಿವಿನಿಂದ ಬಳಲಬಾರದು. ಈ ನಿಟ್ಟಿನಲ್ಲಿ ಎಲ್ಲ ಮುನ್ನೆಚ್ಚರಿಕೆ ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕೊರೋನಾ ವಾರಿಯರ್ಸ್ ಗಾಗಿ ವೆಬ್ಸೈಟ್ ಆರಂಭಿಸಲಾಗಿದೆ. ಪೌರ ಕಾರ್ಮಿಕರ ಮೇಲೆ ಜನ ಹೂವಿನ ಮಳೆ ಸುರಿಸಿದ್ದಾರೆ. ಪೊಲೀಸರ ಮಾತನ್ನು ಕೇಳಿ ಅವರ ಜೊತೆಗೆ ಭಾವನಾತ್ಮಕವಾಗಿ ಬೆರೆಯಿರಿ ಎಂದು ಸಲಹೆ ನೀಡಿದ್ದಾರೆ. ಯಾವುದೇ ಹೋರಾಟ ಹೊಸ ಪಾಠ ಕಲಿಸುತ್ತದೆ. ಹೋರಾಟವೇ ನಮಗೆ ದಾರಿ ತೋರಿಸುತ್ತದೆ. ಕೊರೋನಾ ವಾರಿಯರ್ಸ್ ಗೆ ಎಲ್ಲರೂ ಬೆಂಬಲ ನೀಡಬೇಕು. ರಾಜ್ಯ ಸರ್ಕಾರಗಳಿಗೆ ಧನ್ಯವಾದ ಹೇಳುತ್ತೇನೆ ಎಂದು  ಮೋದಿ ತಿಳಿಸಿದ್ದಾರೆ.

ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಜಗತ್ತಿನ ಬೇರೆ ದೇಶಗಳಿಗೂ ಭಾರತ ಸಹಾಯ ಹಸ್ತ ಚಾಚಿದ್ದು ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಿದೆ. ಕೊರೋನಾ ವಿರುದ್ಧದ ಹೋರಾಟದಲ್ಲಿ ಮಾದರಿ ಕೆಲಸ ನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...