ನವದೆಹಲಿ: ಕೊರೋನಾ ಬಿಕ್ಕಟ್ಟಿನಿಂದಾಗಿ ಸಂಕಷ್ಟದಲ್ಲಿರುವ ದೇಶದ ಜನರಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ನವಂಬರ್ ತಿಂಗಳವರೆಗೆ ಉಚಿತವಾಗಿ ಪಡಿತರ ವಿತರಿಸಲಾಗುವುದು.
ಲಾಕ್ಡೌನ್ ನಂತರ 6ನೇ ಬಾರಿಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ, ದೇಶದ 80 ಕೋಟಿ ಜನರಿಗೆ ಉಚಿತವಾಗಿ ಆಹಾರ ಧಾನ್ಯ ಒದಗಿಸುವ ಪ್ರಧಾನಮಂತ್ರಿ ಕಲ್ಯಾಣ್ ಯೋಜನೆ ನವಂಬರ್ ವರೆಗೆ ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.
ದೇಶದಲ್ಲಿ ಯಾರೂ ಹಸಿವಿನಿಂದ ಇರಬಾರದು ಎನ್ನುವ ಉದ್ದೇಶದಿಂದ ದೀಪಾವಳಿಯವರೆಗೆ ಉಚಿತವಾಗಿ ಅಕ್ಕಿ ಅಥವಾ ಗೋಧಿ, ಮತ್ತು ಬೇಳೆಯನ್ನು ವಿತರಿಸಲಾಗುವುದು. ಬಡವರಿಗಾಗಿ ಎರಡು ಲಕ್ಷ ಕೋಟಿ ರೂಪಾಯಿ ವ್ಯಯ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ಉಚಿತವಾಗಿ ಪಡಿತರ ನೀಡುತ್ತಿದ್ದು, ದೀಪಾವಳಿಯ ವರೆಗೂ ಉಚಿತವಾಗಿ ಪಡಿತರ ನೀಡಲಾಗುವುದು ಎಂದು ಹೇಳಲಾಗಿದೆ.