
ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿ ಗ್ರಾಮದಲ್ಲಿ ಅಕ್ರಮ ಜಿಲೆಟಿನ್ ಸ್ಫೋಟಗೊಂಡಿದ್ದು ಆರು ಮಂದಿ ಕಾರ್ಮಿಕರು ಸಾವಿಗೀಡಾಗಿದ್ದಾರೆ.
ಇನ್ನು ದುರಂತ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ದುರಂತದ ವಾರ್ತೆಯನ್ನ ಕೇಳಿ ನೋವಾಗಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಹಾಗೂ ಘಟನೆಯಲ್ಲಿ ಗಾಯಗೊಂಡವರು ಶೀಘ್ರದಲ್ಲೇ ಗುಣಮುಖರಾಗಲೆಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಅಕ್ರಮವಾಗಿ ಜಿಲೆಟಿನ್ ಸಾಗಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು ಸ್ಫೋಟದ ತೀವ್ರತೆಗೆ ಮೃತರ ದೇಹಗಳು ಚೆಲ್ಲಾಪಿಲ್ಲಿಯಾಗಿವೆ. ದುರಂತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.