alex Certify ಸ್ಫೋಟದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ ಪ್ರಧಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಫೋಟದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ ಪ್ರಧಾನಿ

ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಜಿಲೆಟಿನ್​ ಸ್ಪೋಟ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ದುರಂತ ವರದಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿ ಗ್ರಾಮದಲ್ಲಿ ಅಕ್ರಮ ಜಿಲೆಟಿನ್​ ಸ್ಫೋಟಗೊಂಡಿದ್ದು ಆರು ಮಂದಿ ಕಾರ್ಮಿಕರು ಸಾವಿಗೀಡಾಗಿದ್ದಾರೆ.

ಇನ್ನು ದುರಂತ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ದುರಂತದ ವಾರ್ತೆಯನ್ನ ಕೇಳಿ ನೋವಾಗಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಹಾಗೂ ಘಟನೆಯಲ್ಲಿ ಗಾಯಗೊಂಡವರು ಶೀಘ್ರದಲ್ಲೇ ಗುಣಮುಖರಾಗಲೆಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಅಕ್ರಮವಾಗಿ ಜಿಲೆಟಿನ್​ ಸಾಗಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು ಸ್ಫೋಟದ ತೀವ್ರತೆಗೆ ಮೃತರ ದೇಹಗಳು ಚೆಲ್ಲಾಪಿಲ್ಲಿಯಾಗಿವೆ. ದುರಂತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

— PMO India (@PMOIndia) February 23, 2021

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...