alex Certify ಮುಂಚೂಣಿ ಕಾರ್ಮಿಕರ ಲಸಿಕೆ ವೆಚ್ಚ ಭರಿಸಲಿದೆ ಕೇಂದ್ರ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಚೂಣಿ ಕಾರ್ಮಿಕರ ಲಸಿಕೆ ವೆಚ್ಚ ಭರಿಸಲಿದೆ ಕೇಂದ್ರ ಸರ್ಕಾರ

ಕೊರೊನಾ ವಿರುದ್ಧದ ಹೋರಾಟ ಶುರುವಾಗಲಿದೆ. ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಜನವರಿ 16ರಿಂದ ಶುರುವಾಗಲಿದೆ. ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ ನಂತ್ರ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾರ್ವಜನಿಕ ಜಾಗೃತಿ ಮೂಡಿಸಬೇಕೆಂದಿದ್ದಾರೆ. ಮೊದಲ ಹಂತದಲ್ಲಿ 3 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲಾಗುವುದು. ಮುಂಚೂಣಿ ಕಾರ್ಮಿಕರ ಲಸಿಕೆ ವೆಚ್ಚವನ್ನು ಸರ್ಕಾರ ನೀಡಲಿದೆ ಎಂದು ಮೋದಿ ಹೇಳಿದ್ದಾರೆ.

ವಿಶ್ವದ ಅತಿ ದೊಡ್ಡ ಲಸಿಕೆ ಅಭಿಯಾನದ ಬಗ್ಗೆ ಚರ್ಚೆ ನಡೆದಿದೆ. ರಾಜ್ಯಗಳಿಂದ ಉತ್ತಮ ಸಲಹೆಗಳನ್ನು ಸ್ವೀಕರಿಸಲಾಗಿದೆ. ಕೊರೊನಾ ವಿರುದ್ಧ ಹೋರಾಡಲು ಈ ಮಾತುಕತೆ ಮಹತ್ವದ ಪಾತ್ರ ವಹಿಸಲಿದೆ ಎಂದು ಮೋದಿ ಹೇಳಿದ್ದಾರೆ.

ರಾಜ್ಯಗಳ ಆಡಳಿತವನ್ನು ಹೊಗಳಿದ ಮೋದಿ ಕೊರೊನಾ ವಿರುದ್ಧ ಹಗಲು-ರಾತ್ರಿ ಕೆಲಸ ಮಾಡಿದ್ದಾರೆ ಎಂದ್ರು. ದೇಶದಲ್ಲಿ ಎರಡು ಕೋಟಿ ಲಸಿಕೆ ತಯಾರಿಸಲಾಗಿದೆ. ಎರಡು ಲಸಿಕೆಯನ್ನು ಭಾರತದಲ್ಲಿಯೇ ತಯಾರಿಸಿರುವುದು ಹೆಮ್ಮೆ ಸಂಗತಿ ಎಂದು ಮೋದಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...