ಪ್ರಧಾನಿ ನರೇಂದ್ರ ಮೋದಿ ಮೊದಲು ಕೊರೊನಾ ವೈರಸ್ ಲಸಿಕೆ ಸ್ವೀಕಾರ ಮಾಡಬೇಕು ಅಂತಾ ಆರ್.ಜೆ.ಡಿ. ನಾಯಕ ತೇಜ್ ಪ್ರತಾಪ್ ಯಾದವ್ ಆಗ್ರಹಿಸಿದ್ದಾರೆ.
ದೇಶದಲ್ಲಿ ತುರ್ತು ಅನುಮೋದನೆಗೊಂಡಿರುವ ಕೊರೊನಾ ಲಸಿಕೆಗಳ ಬಗ್ಗೆ ಶಂಕೆ ವ್ಯಕ್ತಪಡಿಸಿದ ತೇಜ್ ಪ್ರತಾಪ್ ಯಾದವ್ ಈ ಹೇಳಿಕೆಯನ್ನ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮೊದಲು ಕೋವಿಡ್ ಲಸಿಕೆ ತೆಗೆದುಕೊಳ್ಳಲಿ, ಅದಾದ ಬಳಿಕ ನಾವೆಲ್ಲ ಕೊರೊನಾ ಲಸಿಕೆ ಸ್ವೀಕಾರ ಮಾಡೋಕೆ ಸಿದ್ಧ ಅಂತಾ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಹೇಳಿದ್ದಾರೆ.
ಕಳೆದ ವಾರ ಭಾರತದ ಡ್ರಗ್ ಕಂಟ್ರೋಲರ್ ಜನರಲ್, ದೇಶದಲ್ಲಿ ಸೇರಮ್ ಇನ್ಸ್ಟಿಟ್ಯೂಟ್ಗೆ ಸೇರಿದ ಕೋವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ನಿರ್ಮಿತ ಕೋ ವ್ಯಾಕ್ಸಿನ್ ಬಳಕೆಗೆ ತುರ್ತು ಅನುಮೋದನೆ ನೀಡಿತ್ತು.
ಕೇಂದ್ರದ ಮಾರ್ಗಸೂಚಿಯಂತೆ ಕೊರೊನಾ ಲಸಿಕೆ ವಿತರಣೆ ಮಾಡೋಕೆ ಬಿಹಾರ ಸಂಪೂರ್ಣ ಸಜ್ಜಾಗಿದೆ ಎಂದು ಸಿಎಂ ನಿತೀಶ್ ಕುಮಾರ್ ಹೇಳಿಕೆ ನೀಡಿದ ಬೆನ್ನಲ್ಲೇ ತೇಜ್ ಪ್ರತಾಪ್ ಯಾದವ್ ಈ ರೀತಿಯ ಹೇಳಿಕೆ ನೀಡಿದ್ದಾರೆ.