ನವದೆಹಲಿ: ಜೂನ್ 30ಕ್ಕೆ ಕೊರೋನಾ ತಡೆಗೆ ಜಾರಿ ಮಾಡಿರುವ ಲಾಕ್ ಡೌನ್ ಅಂತ್ಯವಾಗಲಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
ಚೀನಾ ಆಪ್ ಗಳನ್ನು ಬ್ಯಾನ್ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರ ಸಂಜೆ 4 ಗಂಟೆಗೆ ಮೋದಿ ಭಾಷಣ ನಿಗದಿಯಾಗಿದ್ದು, ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.
ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಇಂದಿನ ಮೋದಿ ಭಾಷಣದಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಬಹುದು ಎಂದು ಹೇಳಲಾಗಿದೆ. ಇಡೀ ದೇಶದ ಜನರ ಚಿತ್ತ ಮೋದಿ ಭಾಷಣದತ್ತ ನೆಟ್ಟಿದೆ. ಹಿಂದೆ ನೋಟ್ ಬ್ಯಾನ್, ಲಾಕ್ಡೌನ್ ಜಾರಿ ಸಂದರ್ಭದಲ್ಲಿ ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿ ಮಹತ್ವದ ನಿರ್ಧಾರ ಪ್ರಕಟಿಸಿದ್ದರು. ಅಂತೆಯೇ ಇಂದು ಸಂಜೆ 4 ಗಂಟೆಗೆ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದು ವಿವಿಧ ವಿಷಯಗಳ ಬಗ್ಗೆ ಪ್ರಸ್ತಾಪಿಸಿ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿದೆ.