ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ವೆಬ್ಸೈಟ್ ಮತ್ತು ಮೊಬೈಲ್ ಆಪ್ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ.
ಕಳೆದ ಜುಲೈನಲ್ಲಿ ಪ್ರಮುಖ ವ್ಯಕ್ತಿಗಳ ಹಲವಾರು ಖಾತೆಗಳನ್ನು ಹ್ಯಾಕ್ ಮಾಡಿದ ನಂತರ ಈ ಘಟನೆ ಸಂಭವಿಸಿದೆ. ಹ್ಯಾಕ್ ಮಾಡಲಾದ ಖಾತೆ ಬಗ್ಗೆ ಸಕ್ರಿಯ ತನಿಖೆ ಕೈಗೊಳ್ಳಲಾಗಿದೆ ಎಂದು ಟ್ವಿಟರ್ ತಿಳಿಸಿದೆ.
ನರೇಂದ್ರ ಮೋದಿಯವರ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು ಹ್ಯಾಕ್ ಮಾಡಿದ ಖಾತೆಯನ್ನು ಭದ್ರಪಡಿಸಲು ಕ್ರಮಕೈಗೊಳ್ಳಲಾಗಿದೆ. ಬೇರೆ ಹೆಚ್ಚುವರಿ ಖಾತೆಗಳು ಮೇಲೆ ಪರಿಣಾಮ ಬೀರಿರುವ ಬಗ್ಗೆ ತಿಳಿದಿಲ್ಲ. ಪರಿಶೀಲನೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಪ್ರಧಾನಿ ಮೋದಿ ಅವರ ವೈಯಕ್ತಿಕ ಟ್ವಿಟರ್ ಖಾತೆಯಲ್ಲಿ 61 ದಶಲಕ್ಷಕ್ಕೂ ಹೆಚ್ಚು ಫಾಲೋಯರ್ಸ್ ಗಳಿದ್ದಾರೆ. ಕಳೆದ ಜುಲೈನಲ್ಲಿ ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಜೊ ಬಿಡೆನ್, ಮಾಜಿ ಅಧ್ಯಕ್ಷ ಬರಾಕ್ ಒಬಾಮಾ, ಬಿಗ್ ಬಿಲಿಯನೇರ್ ಎಲೋನ್ ಮಸ್ಕ್ ಸೇರಿದಂತೆ ಹಲವರ ಖಾತೆಗಳನ್ನು ಹ್ಯಾಕ್ ಮಾಡಲಾಗಿತ್ತು.