ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನವರಿ 16ರಂದು ಕೊರೊನಾ ಲಸಿಕೆ ಅಭಿಯಾನ ಶುರು ಮಾಡಿದ್ದಾರೆ. ಎಲ್ಲ ರಾಜ್ಯಗಳಲ್ಲಿ ಮುಂಚೂಣಿ ಕಾರ್ಮಿಕರಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ. ಎರಡನೇ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕೊರೊನಾ ಲಸಿಕೆ ನೀಡಲಾಗುವುದು. ಎರಡನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟ ಜನರಿಗೆ ಕೊರೊನಾ ಲಸಿಕೆ ಹಾಕಲಾಗುವುದು.
ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಧಾನಿ ಈ ಬಗ್ಗೆ ಮಾಹಿತಿ ನೀಡಿದ್ದರು. ಕೊರೊನಾ ಲಸಿಕೆ ಬಗ್ಗೆ ಭಯಪಡುವ ಅಗತ್ಯವಿಲ್ಲ. ಎರಡನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲಾಗುವುದು. 50 ವರ್ಷ ಮೇಲ್ಪಟ್ಟ ಎಲ್ಲ ಸಂಸದರು ಹಾಗೂ ಶಾಸಕರಿಗೆ ಕೊರೊನಾ ಲಸಿಕೆ ಹಾಕಲಾಗುವುದು. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ಹಾಕಲಾಗ್ತಿದ್ದು, 7 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ಹಾಕಲಾಗುವುದು.
ಎರಡನೇ ಹಂತದಲ್ಲಿ ಸೈನಿಕರು, ಅರೆ ಸೈನಿಕ ಪಡೆಗಳಿಗೂ ಲಸಿಕೆ ನೀಡಲಾಗುವುದು. ಆದ್ರೆ ಎರಡನೇ ಹಂತದ ಲಸಿಕೆ ಅಭಿಯಾನ ಎಂದಿನಿಂದ ನಡೆಯಲಿದೆ ಎಂಬುದು ಸ್ಪಷ್ಟವಾಗಿಲ್ಲ. ಆದ್ರೆ ಎರಡನೇ ಹಂತದ ಅಭಿಯಾನದ ಮಾರ್ಗಸೂಚಿ ಸಿದ್ಧವಾಗಿದೆ. ಯಾವ ಹಂತದಲ್ಲಿ ಯಾವ ಕೊರೊನಾ ಲಸಿಕೆ ನೀಡಲಾಗುವುದು ಎನ್ನುವ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಲಿದೆ. ಕೊರೊನಾ ಲಸಿಕೆ ತೆಗೆದುಕೊಂಡ ಕೆಲವರ ಮೇಲೆ ಅಡ್ಡಪರಿಣಾಮ ಕಾಣಿಸಿಕೊಂಡಿದೆ. ಹಾಗಾಗಿ ಅನೇಕ ರಾಜ್ಯಗಳ ಆರೋಗ್ಯ ಕಾರ್ಯಕರ್ತರು ಕೊರೊನಾ ಲಸಿಕೆ ತೆಗೆದುಕೊಳ್ಳಲು ಭಯಪಡ್ತಿದ್ದಾರೆ. ಅವ್ರಿಗೆ ಕೌನ್ಸಿಲಿಂಗ್ ಮಾಡಲಾಗ್ತಿದೆ.