ನವದೆಹಲಿ: ರಾಜೀವ್ ಗಾಂಧಿ ಫೌಂಡೇಷನ್ ಗೆ ಪಿಎಂ ರಿಲೀಫ್ ಫಂಡ್ ವರ್ಗಾವಣೆ ಮಾಡಲಾಗಿದೆ. ಪಿಎಂ ರಿಲೀಫ್ ಫಂಡ್ ನಿಂದ ರಾಜೀವ್ ಗಾಂಧಿ ಫೌಂಡೇಷನ್ ಗೆ ಹಣ ನೀಡಿರುವುದು ಬೆಳಕಿಗೆ ಬಂದಿದೆ.
2005 -06 ಮತ್ತು 2007 -08ನೇ ಸಾಲಿನಲ್ಲಿ ರಾಜೀವ್ ಗಾಂಧಿ ಫೌಂಡೇಶನ್ ಗೆ ಸಹಾಯ ಮಾಡಿರುವುದು ದಾಖಲೆಗಳಲ್ಲಿ ಬಹಿರಂಗವಾಗಿದೆ. ಸಂಕಷ್ಟದಲ್ಲಿರುವ ದೇಶದ ಜನರಿಗೆ ಆರ್ಥಿಕ ನೀಡಲು ಪಿಎಂ ರಿಲೀಫ್ ಫಂಡ್ ಸ್ಥಾಪನೆ ಮಾಡಲಾಗಿದೆ.
ಆದರೆ, ಯುಪಿಎ ಅವಧಿಯಲ್ಲಿ ಸೋನಿಯಾ ಗಾಂಧಿ ಅಧ್ಯಕ್ಷರಾಗಿರುವ ರಾಜೀವ್ ಗಾಂಧಿ ಫೌಂಡೇಶನ್ ಗೆ ಆರ್ಥಿಕ ನೆರವು ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ರಾಜೀವ್ ಗಾಂಧಿ ಫೌಂಡೇಶನ್ ಗೆ ಸೋನಿಯಾಗಾಂಧಿ ಅಧ್ಯಕ್ಷರಾಗಿದ್ದಾರೆ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸದಸ್ಯರಾಗಿದ್ದಾರೆ. ಹೀಗಾಗಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇಕ್ಕಟ್ಟಿಗೆ ಸಿಲುಕಿದ್ದಾರೆ ಎನ್ನಲಾಗಿದೆ.
ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಈ ಕುರಿತಾಗಿ ಗಂಭೀರ ಆರೋಪ ಮಾಡಿದ್ದು, ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದಾರೆ.