ನವದೆಹಲಿ: 80 ವರ್ಷ ಮೇಲ್ಪಟ್ಟ ವೃದ್ಧರು ಮತ್ತು ವಿಕಲಚೇತನರ ಮನೆಬಾಗಿಲಿಗೆ ಅಂಚೆ ಮತಪತ್ರ ಕಳುಹಿಸಲಾಗುವುದು.
ಅಂಚೆ ಮತಪತ್ರದ ಮೂಲಕ ವಿಕಲಚೇತನರು ಮತ್ತು ವೃದ್ಧರಿಗೆ ಮತ ಹಾಕುವ ಅವಕಾಶವನ್ನು ಚುನಾವಣಾ ಆಯೋಗ ಕಲ್ಪಿಸಿದೆ. ಚುನಾವಣೆ ಅಧಿಸೂಚನೆ ಹೊರಡಿಸಿದ 5 ದಿನಗಳ ಒಳಗೆ ಮತಗಟ್ಟೆ ಅಧಿಕಾರಿಗಳು ತಲುಪಿಸುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಬೇಕಿದೆ.
ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದ್ದು ವೃದ್ಧರು, ವಿಕಲಚೇತನರ ಮನೆ ಬಾಗಿಲಿಗೆ ಮತಪತ್ರ ಕಳುಹಿಸಲು ವ್ಯವಸ್ಥೆ ಮಾಡುವಂತೆ ತಿಳಿಸಲಾಗಿದೆ. ಎಲ್ಲಾ ಚುನಾವಣೆ ಮತ್ತು ಉಪಚುನಾವಣೆಗಳಿಗೆ ಇದು ಅನ್ವಯವಾಗಲಿದೆ ಎಂದು ಹೇಳಲಾಗಿದೆ.