alex Certify ವೃದ್ಧರು, ವಿಕಲಚೇತನರಿಗೆ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೃದ್ಧರು, ವಿಕಲಚೇತನರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: 80 ವರ್ಷ ಮೇಲ್ಪಟ್ಟ ವೃದ್ಧರು ಮತ್ತು ವಿಕಲಚೇತನರ ಮನೆಬಾಗಿಲಿಗೆ ಅಂಚೆ ಮತಪತ್ರ ಕಳುಹಿಸಲಾಗುವುದು.

ಅಂಚೆ ಮತಪತ್ರದ ಮೂಲಕ ವಿಕಲಚೇತನರು ಮತ್ತು ವೃದ್ಧರಿಗೆ ಮತ ಹಾಕುವ ಅವಕಾಶವನ್ನು ಚುನಾವಣಾ ಆಯೋಗ ಕಲ್ಪಿಸಿದೆ. ಚುನಾವಣೆ ಅಧಿಸೂಚನೆ ಹೊರಡಿಸಿದ 5 ದಿನಗಳ ಒಳಗೆ ಮತಗಟ್ಟೆ ಅಧಿಕಾರಿಗಳು ತಲುಪಿಸುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಬೇಕಿದೆ.

ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದ್ದು ವೃದ್ಧರು, ವಿಕಲಚೇತನರ ಮನೆ ಬಾಗಿಲಿಗೆ ಮತಪತ್ರ ಕಳುಹಿಸಲು ವ್ಯವಸ್ಥೆ ಮಾಡುವಂತೆ ತಿಳಿಸಲಾಗಿದೆ. ಎಲ್ಲಾ ಚುನಾವಣೆ ಮತ್ತು ಉಪಚುನಾವಣೆಗಳಿಗೆ ಇದು ಅನ್ವಯವಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...