ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಒಂದು ರೂಪಾಯಿ ದಂಡ ವಿಧಿಸಿದೆ.
ಸೆಪ್ಟೆಂಬರ್ 15ರೊಳಗೆ ಈ ದಂಡವನ್ನು ಪಾವತಿಸುವಂತೆ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ನ್ಯಾಯಾಧೀಶರುಗಳ ಕಾರ್ಯವೈಖರಿ ಕುರಿತಂತೆ ಪ್ರಶಾಂತ್ ಭೂಷಣ್ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದು, ಹೀಗಾಗಿ ಅವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿತ್ತು.
ಪ್ರಶಾಂತ್ ಭೂಷಣ್ ನ್ಯಾಯಾಲಯದ ಕ್ಷಮೆ ಕೋರಿದರೆ ಪ್ರಕರಣವನ್ನು ಕೈಬಿಡುವುದಾಗಿ ಹೇಳಲಾಗಿದ್ದರೂ ಕ್ಷಮೆ ಕೋರಲು ಅವರು ನಿರಾಕರಿಸಿದ್ದರು. ಹೀಗಾಗಿ ಒಂದು ರೂಪಾಯಿ ದಂಡ ವಿಧಿಸಿ ಪ್ರಕರಣವನ್ನು ಇತ್ಯರ್ಥಗೊಳಿಸಲಾಗಿದೆ.
ನಿಗದಿತ ಸಮಯದೊಳಗೆ ದಂಡ ಪಾವತಿಸದಿದ್ದರೆ ಮೂರು ತಿಂಗಳು ಜೈಲು ಅಥವಾ ಮೂರು ವರ್ಷಗಳವರೆಗೆ ವಕೀಲರಾಗಿ ಕಾರ್ಯನಿರ್ವಹಿಸದಂತೆ ನಿಷೇಧ ಹೇರಲಾಗುತ್ತದೆ.