ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸುಪ್ರೀಂ ಕೋರ್ಟ್ ಗೆ ಒಂದು ರೂಪಾಯಿ ದಂಡ ನೀಡಲು ಮುಂದಾಗಿದ್ದಾರೆ. ಒಂದು ವೇಳೆ ಪ್ರಶಾಂತ್ ಭೂಷಣ್ ಒಂದು ರೂಪಾಯಿ ಪಾವತಿ ಮಾಡದೆ ಹೋದಲ್ಲಿ ಮೂರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗಿತ್ತು.
ಸುಪ್ರೀಂ ಕೋರ್ಟ್ ತೀರ್ಪು ನೀಡ್ತಿದ್ದಂತೆ ಹಿರಿಯ ವಕೀಲ ರಾಜೀವ್ ಧವನ್ ಒಂದು ರೂಪಾಯಿ ನೀಡಿದ್ರು ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ.
ದಂಡ ಪಾವತಿಸಲು ಸೆಪ್ಟೆಂಬರ್ 15 ರವರೆಗೆ ಸುಪ್ರೀಂ ಕೋರ್ಟ್ ಕಾಲಾವಕಾಶ ನೀಡಿತ್ತ. ಒಂದು ವೇಳೆ ನಿಗದಿತ ಅವಧಿಯೊಳಗೆ ದಂಡ ಪಾವತಿಸದಿದ್ದರೆ ಮೂರು ತಿಂಗಳು ಜೈಲು ಅಥವಾ ಮೂರು ವರ್ಷಗಳ ಕಾಲ ವಕೀಲರಾಗಿ ಕಾರ್ಯ ನಿರ್ವಹಿಸದಂತೆ ನಿಷೇಧ ಹೇರಲಾಗುತ್ತದೆ ಎಂದು ಕೋರ್ಟ್ ಹೇಳಿತ್ತು.
ಈ ಮೊದಲು ವಿಚಾರಣೆ ನಡೆಸಿದ್ದ ನ್ಯಾಯಾಲಯ ಕ್ಷಮೆ ಕೋರಿದರೆ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಡುವುದಾಗಿ ಹೇಳಿತ್ತು. ಆದರೆ ಪ್ರಶಾಂತ್ ಭೂಷಣ್ ಇದಕ್ಕೆ ನಿರಾಕರಿಸಿದ್ದರು.