ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರ ಮೊಮ್ಮಗಳು ಪಟಾಕಿ ಸಿಡಿತದಿಂದ ಗಾಯಗೊಂಡು ಸಾವನ್ನಪ್ಪಿದ್ದಾಳೆ.
8 ವರ್ಷದ ಬಾಲಕಿ ಮಂಗಳವಾರ ಬೆಳಿಗ್ಗೆ ಪಟಾಕಿ ಸಿಡಿಸುವಾಗ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ರೀಟಾ ಬಹುಗುಣ ಜೋಶಿ ಅವರ ಪುತ್ರ ಮಯಾಂಕ್ ಜೋಶಿಯ ಹಿರಿಯ ಪುತ್ರಿಯಾಗಿರುವ ಬಾಲಕಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಹಚ್ಚುವಾಗ ಪಟಾಕಿ ಸಿಡಿದು ಶೇಕಡ 60 ರಷ್ಟು ಸುಟ್ಟ ಗಾಯಗಳಾಗಿವೆ. ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
ಆಕೆಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಸಾಗಿಸಲಾಗಿತ್ತು. ಮಾಹಿತಿ ತಿಳಿದ ಕೂಡಲೇ ಅಪಾರ ಸಂಖ್ಯೆಯ ಜನ ರೀಟಾ ಬಹುಗುಣ ಜೋಶಿ ಅವರ ನಿವಾಸಕ್ಕೆ ದೌಡಾಯಿಸಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.