ದೇಶಾದ್ಯಂತ ಕೋವಿಡ್ ಸಾಂಕ್ರಾಮಿಕ ವ್ಯಾಪಕವಾಗಿ ಹರಡುತ್ತಿದೆ, ಜನ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸಲು ಅಷ್ಟಾಗಿ ಆಸಕ್ತಿ ತೋರಿಸುತ್ತಿಲ್ಲ, ನಿಯಮಗಳ ಉಲ್ಲಂಘನೆ ಎದ್ದು ಕಾಣುತ್ತಿದೆ. ಜನರನ್ನು ನಿಯಂತ್ರಿಸುವುದೇ ಪೊಲೀಸರಿಗೆ ಹರಸಾಹಸ ವಾಗಿದೆ.
ಇಂತಹ ಸಂದರ್ಭದಲ್ಲಿ ಮಾಸ್ಕ್ ಧರಿಸದೇ ಅಡ್ಡಾಡುವ ಜನರಿಗೆ ತಿಳುವಳಿಕೆ ಮೂಡಿಸಲು ಐದು ತಿಂಗಳ ಗರ್ಭಿಣಿಯಾದ ಡಿಎಸ್ಪಿ ಶೀಲಾ ಸಾಹು ಎಂಬುವರು ಲಾಠಿ ಹಿಡಿದು ರಸ್ತೆಯಲ್ಲಿ ಕಾಣಿಸಿಕೊಂಡ ಫೋಟೋ ಒಂದು ವೈರಲ್ ಆಗಿದೆ.
ಕುಟುಂಬಸ್ಥರೇ ಕೈಬಿಟ್ಟ ಸೋಂಕಿತನ ಮೃತದೇಹಕ್ಕೆ ಮುಸ್ಲಿಂ ಸಹೋದರರಿಂದ ಅಂತಿಮ ವಿಧಿ ವಿಧಾನ..!
ನಕ್ಸಲ್ ಪೀಡಿತ ಛತ್ತೀಸ್ ಘಡದ ಬಸ್ತರ್ ವಿಭಾಗದ ದಾಂತೇವಾಡದಲ್ಲಿ ಡಿಎಸ್‌ಪಿಯಾಗಿರುವ ಶೀಲಾ ಸಾಹು ಸಂಚಾರ ನಿಯಂತ್ರಿಸುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆ ಫೋಟೋವನ್ನು ಐಪಿಎಸ್ ಅಧಿಕಾರಿ ದೀಪನ್ಶು ಕಬ್ರಾ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.
ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಈ ಫೋಟೋ ವೈರಲ್ ಆಗಿದ್ದು, ಕರ್ತವ್ಯ ನಿಷ್ಠೆಯನ್ನು ನೆಟಿಜನ್‌ಗಳು ಶ್ಲಾಘಿಸಿದ್ದಾರೆ. ಆದಾಗ್ಯೂ ಕೆಲವರು ಅಧಿಕಾರಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.