alex Certify ರಾಷ್ಟ್ರಪತಿ ದ್ರೌಪದಿ ಮುರ್ಮು ಅವಹೇಳನ: ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರಿಗೆ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಷ್ಟ್ರಪತಿ ದ್ರೌಪದಿ ಮುರ್ಮು ಅವಹೇಳನ: ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರಿಗೆ ನೋಟಿಸ್

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಅವಹೇಳನಕಾರಿ ಲೇಖನ ಬರೆದಿದ್ದ ಕನ್ನಡ ದಿನಪತ್ರಿಕೆಯ ಪ್ರಧಾನ ಸಂಪಾದಕರಿಗೆ(ವಿಶ್ವವಾಣಿ ಪತ್ರಿಕೆ ಸಂಪಾದಕ ವಿಶ್ವೇಶ್ವರ ಭಟ್) ನೋಟಿಸ್ ಜಾರಿ ಮಾಡಲಾಗಿದೆ.

ರಾಷ್ಟ್ರೀಯ ಮಹಿಳಾ ಆಯೋಗ ಈ ಬಗ್ಗೆ ಟ್ವೀಟ್ ಮಾಡಿದ್ದು, ರಾಷ್ಟ್ರಪತಿ ವಿರುದ್ಧ ಅವಹೇಳನಕಾರಿಯಾಗಿ ಬರೆದ ಬಗ್ಗೆ ಟ್ವಿಟರ್ ಪೋಸ್ಟ್ ಅನ್ನು ರಾಷ್ಟ್ರೀಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಅ. 26 ರಂದು ಮಧ್ಯಾಹ್ನ 12:30ಕ್ಕೆ ಖುದ್ದಾಗಿ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದೆ.

ಮುನ್ನ ಮೊಹಮ್ಮದ್ ಮುಫಾಜ್ ಎಂಬುವರು ಅ. 9 ರಂದು ಟ್ವೀಟ್ ಮಾಡಿ ಕನ್ನಡ ದಿನಪತ್ರಿಕೆ ಸಂಪಾದಕ ರಾಷ್ಟ್ರಪತಿ ಅವರನ್ನು ಅವಹೇಳನ ಮಾಡಿದ್ದಾರೆ ಎಂದು ತಿಳಿಸಿದ್ದು, ಪತ್ರಿಕೆಯ ಸಂಪಾದಕೀಯ ಪುಟದಲ್ಲಿ ಪ್ರಕಟವಾದ ಲೇಖನದ ಫೋಟೋಗಳನ್ನು ಹಂಚಿಕೊಂಡಿದ್ದರು. ರಾಷ್ಟ್ರಪತಿ ಭವನದ ಟ್ವಿಟರ್ ಖಾತೆಗೆ ಟ್ವೀಟ್ ಟ್ಯಾಗ್ ಮಾಡಲಾಗಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿದ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...