ಭಾರತ ಸರ್ಕಾರ, ಪ್ರಧಾನಮಂತ್ರಿಯ ಅಧಿಕೃತ ವೆಬ್‌ಸೈಟ್ pmindia.gov.inನಲ್ಲಿ ಬದಲಾವಣೆ ಮಾಡಲಿದೆ. ಪ್ರಧಾನ ಮಂತ್ರಿ ವೆಬ್‌ಸೈಟ್ ಹೊಸ ಬಣ್ಣದಲ್ಲಿ ಕಾಣಿಸಲಿದೆ. ಸರ್ಕಾರ ಹೊರಡಿಸಿದ ಪ್ರಸ್ತಾವನೆಯ ಪ್ರಕಾರ, ಈಗ ವೆಬ್‌ಸೈಟ್ ವಿಶ್ವಸಂಸ್ಥೆಯ 6 ಅಧಿಕೃತ ಭಾಷೆಗಳಲ್ಲಿ ಮತ್ತು 22 ಭಾರತೀಯ ಭಾಷೆಗಳಲ್ಲಿ ವೀಕ್ಷಿಸಬಹುದು.
ಪ್ರಸ್ತುತ, ಭಾರತದ ಪ್ರಧಾನ ಮಂತ್ರಿಯ ವೆಬ್‌ಸೈಟ್ 12 ಭಾಷೆಗಳಲ್ಲಿ ಲಭ್ಯವಿದೆ. ಈ ಪ್ರಸ್ತಾಪದಲ್ಲಿ ಅರೇಬಿಕ್, ಚೈನೀಸ್, ಇಂಗ್ಲಿಷ್, ಫ್ರೆಂಚ್, ರಷ್ಯನ್ ಮತ್ತು ಸ್ಪ್ಯಾನಿಷ್ ಸೇರಿವೆ. ಅಸ್ಸಾಮೀಸ್, ಬಂಗಾಳಿ, ಬೋಡೋ, ಡೋಗ್ರಿ, ಗುಜರಾತಿ, ಹಿಂದಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮೈಥಿಲಿ, ಮಲಯಾಳಂ, ಮಣಿಪುರಿ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ಸಂಸ್ಕೃತ, ಸಂತಾಲಿ, ಸಿಂಧಿ, ತಮಿಳು, ತೆಲುಗು ಮತ್ತು ಉರ್ದು ಭಾಷೆಯಲ್ಲಿ ಸಿಗಲಿದೆ.
ರಾಷ್ಟ್ರೀಯ ಇ-ಆಡಳಿತ ವಿಭಾಗ (ಎನ್‌ಜಿಡಿ) ನೀಡಿದ ಆರ್‌ಎಫ್‌ಪಿ ಪ್ರಕಾರ, ವೆಬ್‌ಸೈಟ್‌ಗಳ ವಿನ್ಯಾಸ, ಅಭಿವೃದ್ಧಿ ಮತ್ತು ನಿರ್ವಹಣೆಗಾಗಿ ಅರ್ಹ ಮತ್ತು ಅನುಭವಿ ಏಜೆನ್ಸಿಯನ್ನು ನೇಮಿಸಿಕೊಳ್ಳಲು ಸರ್ಕಾರ ಬಯಸಿದೆ. ವೆಬ್‌ಸೈಟ್ ಅಭಿವೃದ್ಧಿ ಮತ್ತು ನಿರ್ವಹಣೆ ಜೊತೆಗೆ 22 ಅಧಿಕೃತ ಭಾರತೀಯ ಭಾಷೆಗಳು ಸೇರಿದಂತೆ ವಿಶ್ವಸಂಸ್ಥೆಯ ಆರು ಅಧಿಕೃತ ಭಾಷೆಗಳಲ್ಲಿ ಪಿಎಂ ಇಂಡಿಯಾ ಪೋರ್ಟಲ್ ಅನ್ನು ರಚಿಸುವ ಅಗತ್ಯವಿದೆ ಎಂದು ಹೇಳಲಾಗಿದೆ.