ನವದೆಹಲಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಅಧಿಕೃತ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸಿದ್ದಾರೆ.
ದೆಹಲಿಯ ಲೋಧಿ ಎಸ್ಟೇಟ್ ನಲ್ಲಿರುವ ಸರ್ಕಾರಿ ಬಂಗಲೆಯನ್ನು ತೆರವು ಮಾಡುವಂತೆ ಕೇಂದ್ರ ಸರ್ಕಾರ ಪ್ರಿಯಾಂಕಾ ಗಾಂಧಿ ಅವರಿಗೆ ನೋಟಿಸ್ ನೀಡಿದ್ದು ಒಂದು ತಿಂಗಳ ಒಳಗೆ ನಿವಾಸ ಖಾಲಿ ಮಾಡಬೇಕು. ಇಲ್ಲದಿದ್ದರೆ ಹಾನಿ ಶುಲ್ಕ ಹಾಗೂ ದಂಡದ ರೂಪದಲ್ಲಿ ಬಾಡಿಗೆ ಪಾವತಿಸಬೇಕೆಂದು ಆದೇಶಿಸಲಾಗಿತ್ತು.
ಲೋದಿ ಎಸ್ಟೇಟ್ 35 ಮನೆ ಖಾಲಿ ಮಾಡುವ ಮೊದಲು ಪ್ರಿಯಾಂಕಾ ಗಾಂಧಿ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್, ನೀರಿನ ಶುಲ್ಕ ಪಾವತಿಸಿದ್ದಾರೆ. ಮನೆ ಬೀಗವನ್ನು ಸೆಂಟ್ರಲ್ ಪಬ್ಲಿಕ್ ವರ್ಕ್ ಡಿಪಾರ್ಟ್ಮೆಂಟ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಿರುವ ಅವರು ಸರ್ಕಾರದ ಆದೇಶದ ಅನ್ವಯ ಬಂಗಲೆಯನ್ನು ತೆರವುಗೊಳಿಸಿದ್ದಾರೆ. ಈ ಸರ್ಕಾರಿ ಬಂಗಲೆಯನ್ನು ರಾಜ್ಯಸಭೆ ಸದಸ್ಯ ಅನಿಲ್ ಬಾಲುನೆ ಅವರಿಗೆ ಹಂಚಿಕೆ ಮಾಡಲಾಗಿದೆ.