
27 ವರ್ಷದ ರಣವೀತ್ ಸಿಂಗ್ ಮೃತಪಟ್ಟ ವ್ಯಕ್ತಿಯಾಗಿದ್ದು, ಈತ ಆಸ್ಟ್ರೇಲಿಯಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಉತ್ತರ ಪ್ರದೇಶದ ತನ್ನ ತವರೂರಿಗೆ ಬಂದಿದ್ದ ಈತ 3 ದಿನಗಳ ಹಿಂದಷ್ಟೇ ಸ್ನೇಹಿತರೊಂದಿಗೆ ದೆಹಲಿಗೆ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಎನ್ನಲಾಗಿದೆ.
ಮಂಗಳವಾರದ ರ್ಯಾಲಿ ಸಂದರ್ಭದಲ್ಲಿ ರಣವೀತ್ ಸಿಂಗ್ ವೇಗವಾಗಿ ಟ್ರ್ಯಾಕ್ಟರ್ ಚಲಾಯಿಸಿದ್ದು, ಈ ವೇಳೆ ತಡೆಗೋಡೆಗೆ ಡಿಕ್ಕಿಯಾಗಿ ಅದು ಪಲ್ಟಿಯಾಗಿತ್ತು. ಈ ಸಂದರ್ಭದಲ್ಲಿ ತಲೆಗೆ ತೀವ್ರ ಪೆಟ್ಟಾದ ಕಾರಣ ನವರೀತ್ ಸಿಂಗ್ ಸ್ಥಳದಲ್ಲಿಯೇ ಮೃತಪಟ್ಟಿದ್ದ.