alex Certify ಕ್ವಾರಂಟೈನ್ ವೈದ್ಯರಿಗೊಂದು ಖುಷಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ವಾರಂಟೈನ್ ವೈದ್ಯರಿಗೊಂದು ಖುಷಿ ಸುದ್ದಿ

Quarantine period of doctors engaged in corona treatment will now be considered 'on duty'

ಕೊರೊನಾ  ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಉತ್ತಮ ಸೌಲಭ್ಯಗಳನ್ನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕೊರೊನಾ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಖುಷಿ ಸುದ್ದಿ ನೀಡಿದೆ. ಕೊರೊನಾ ಕಾರಣಕ್ಕೆ ವೈದ್ಯರ ಕ್ವಾರಂಟೈನನ್ನು ರಜೆ ಬದಲು ಕರ್ತವ್ಯವೆಂದು ಪರಿಗಣಿಸಲಾಗುವುದು ಎಂದಿದೆ.

ಆಗಸ್ಟ್ 6 ರಂದು ಎಲ್ಲಾ ರಾಜ್ಯಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಕೇಂದ್ರ ನ್ಯಾಯಾಲಯಕ್ಕೆ ತಿಳಿಸಿದೆ. ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರ ಕ್ವಾರಂಟೈನ್ ರಜೆ ಎಂದು ಈ ಹಿಂದೆ ಪರಿಗಣಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ ಕೋರ್ಟ್, ಸರ್ಕಾರದಿಂದ ಉತ್ತರ ಕೇಳಿತ್ತು.

ದೆಹಲಿ, ಮಹಾರಾಷ್ಟ್ರ, ಪಂಜಾಬ್, ತ್ರಿಪುರ ಮತ್ತು ಕರ್ನಾಟಕದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಸಂಬಳ ನೀಡುತ್ತಿಲ್ಲ ಎಂದು ಯುನೈಟೆಡ್ ರೆಸಿಡೆಂಟ್ ಮತ್ತು ಡಾಕ್ಟರ್ಸ್ ಅಸೋಸಿಯೇಶನ್  ಅರ್ಜಿಯಲ್ಲಿ ತಿಳಿಸಿದೆ. ವಿಚಾರಣೆ ನಡೆಸಿದ ಕೋರ್ಟ್, ತಕ್ಷಣ ಆರೋಗ್ಯ ಕಾರ್ಯಕರ್ತರಿಗೆ ಹಣ ಪಾವತಿಸುವಂತೆ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...